ಮಂಗಳೂರು –
ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ 3ರಂದು ಶುಕ್ರವಾರ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಸತಿಶಾಲೆಗಳಿಗೆ, ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ
ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.ಈ ಆದೇಶ ಉಲ್ಲಂಘಿಸಿದಲ್ಲಿ 2005ರ ವಿಪತ್ತು ನಿರ್ವಹಣೆ ಕಾಯ್ದೆಯ ಕಲಂ 51 ಬಿ ಅನ್ವಯ ಕಾನೂನು ಕ್ರಮ ಕೈಗೊಳ್ಳ ಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮಂಗಳೂರು…..



