ಬೆಂಗಳೂರು –
ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ನಾಳೆ ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿ ರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟು ಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ರಜೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶವನ್ನು ಮಾಡಿದ್ದಾರೆ
ಧಾರಾಕಾರ ಮಳೆಯಿಂದಾಗಿ ಉಂಟಾಗಬಹುದಾದ ಅಪಾಯ ಗಳನ್ನು ತಪ್ಪಿಸಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ಅಧಿಕೃತ ರಜೆ ಆದೇಶವನ್ನು ಹೊರಡಿಸಿದ್ದಾರೆ. ಮಳೆ ಪೀಡಿತ ತಾಲ್ಲೂಕುಗಳ ಪೋಷಕರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವಂತೆ ಹಾಗೂ ಹಳ್ಳ-ಕೊಳ್ಳಗಳ ಬಳಿ ತೆರಳದಂತೆ ಆಡಳಿತ ಮಂಡಳಿ ಮನವಿ ಮಾಡಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



