ಮತದಾರರ ಪಟ್ಟಿ ಪರಿಷ್ಕರಣೆ ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ – ಕಾಂಗ್ರೆಸ್ ಮುಖಂಡ ಅಶ್ಫಾಕ್ ಕುಮಟಾಕರ್ ವ್ಯಂಗ್ಯ

Suddi Sante Desk
ಮತದಾರರ ಪಟ್ಟಿ ಪರಿಷ್ಕರಣೆ ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ – ಕಾಂಗ್ರೆಸ್ ಮುಖಂಡ ಅಶ್ಫಾಕ್ ಕುಮಟಾಕರ್ ವ್ಯಂಗ್ಯ

ಹುಬ್ಬಳ್ಳಿ

ಮತದಾರರ ಪಟ್ಟಿ ಪರಿಷ್ಕರಣೆ: ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ – ಕಾಂಗ್ರೆಸ್ ಮುಖಂಡ ಅಶ್ಫಾಕ್ ಕುಮಟಾಕರ್ ವ್ಯಂಗ್ಯ ಹೌದು ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಭಯದಿಂದ ಬಿಜೆಪಿ ನಾಯಕರಿಗೆ ತೀವ್ರ ಹತಾಶೆ ಕಾಡುತ್ತಿದ್ದು, ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಇಲ್ಲಸಲ್ಲದ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಶ್ಫಾಕ್ ಕುಮಟಾಕರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಚುನಾವಣಾ ಆಯೋಗದ ಆದೇಶದಂತೆ ಬಿಎಲ್‌ಓಗಳು ಅತ್ಯಂತ ಪಾರದರ್ಶ ಕವಾಗಿ ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ನಡೆಸು ತ್ತಿದ್ದಾರೆ ಆದರೆ ಈ ಪ್ರಕ್ರಿಯೆಯನ್ನು ಸಹಿಸದ ಬಿಜೆಪಿಗರು ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಆರ್. ಅಶೋಕ ಹಾಗೂ ಬಸವರಾಜ ಬೊಮ್ಮಾಯಿ ಅವರು ಸೋಲಿನ ಭೀತಿಯಿಂದಲೇ ಇಂತಹ ಬೇಜವಾಬ್ದಾರಿ ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

ಬಿಜೆಪಿಯ ಈ ಅನಗತ್ಯ ಒತ್ತಡ ಮತ್ತು ಕಿರುಕುಳದಿಂದಾಗಿ ಈಗಾಗಲೇ ಇಬ್ಬರು ಅಧಿಕಾರಿಗಳು ಅಕಾಲಿಕ ಸಾವಿಗೀಡಾಗಿ ದ್ದಾರೆ. ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸುವಂತೆ ಆಗ್ರಹಿಸುತ್ತಿರುವ ಬಿಜೆಪಿ ಮುಖಂಡರ ನಡೆ ದೇಶದ ಸ್ವಾಯತ್ತ ಸಂಸ್ಥೆಯಾದ ಚುನಾವಣಾ ಆಯೋಗಕ್ಕೆ ಮಾಡುತ್ತಿರುವ ಅಪಮಾನವಾಗಿದೆ ಎಂದು ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.