ಬೆಳಗಾವಿ –
ಶಾಲಾ ಮಕ್ಕಳಿಂದ ಎಸ್ಐಆರ್ ಫಾರಂ ಭರ್ತಿ – ವೈರಲ್ ಆಯ್ತು ವಿಡಿಯೋ ಹೌದು ಇಂತಹ ದೊಂದು ಘಟನೆ ಬೆಳಗಾವಿ ಜಿಲ್ಲೆ ಯಲ್ಲಿ ಬೆಳಕಿಗೆ ಬಂದಿದೆ.ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸರ್ಕಾರಿ ಶಾಲೆಯ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪವೊಂದು ಬೆಳಗಾವಿ ಜಿಲ್ಲೆಯಿಂದ ಕೇಳಿಬಂದಿದೆ.
ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ ಮತ ದಾರರ ಪಟ್ಟಿ ಪರಿಷ್ಕರಣೆಯಂತಹ ಜವಾಬ್ದಾರಿಯುತ ಕೆಲಸ ಗಳನ್ನು ಬೂತ್ ಮಟ್ಟದ ಅಧಿಕಾರಿಗಳು ನಿರ್ವಹಿಸಬೇಕಿರುತ್ತದೆ.
ಆದರೆ ಮರಡಿಮಠ ಗ್ರಾಮದ ಶಾಲೆಯಲ್ಲಿ ಬಿಎಲ್ಒಗಳು ತಮ್ಮ ಕೆಲಸಕ್ಕೆ ಶಾಲಾ ಮಕ್ಕಳನ್ನು ಬಳಸಿಕೊಂಡು ಅರ್ಜಿಗಳನ್ನು ತುಂಬಿಸುತ್ತಿದ್ದರು ಎನ್ನಲಾಗಿದೆ. ಮಕ್ಕಳು ಕುಳಿತುಕೊಂಡು ಎಸ್ಐಆರ್ ಅರ್ಜಿಗಳನ್ನು ಭರ್ತಿ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಗಮನ ಸೆಳೆದಿವೆ
ಈ ಸೂಕ್ಷ್ಮ ವಿಚಾರದ ಕುರಿತು ಗೋಕಾಕ್ ತಹಶೀಲ್ದಾರ್ ಮೋಹನ್ ಭಸ್ಮೆ ಅವರು ಪ್ರತಿಕ್ರಿಯೆ ನೀಡಿದ್ದಾರೆ ಶಾಲಾ ಮಕ್ಕಳನ್ನು ಎಸ್ಐಆರ್ ಅರ್ಜಿ ತುಂಬುವ ಪ್ರಕ್ರಿಯೆಗೆ ಬಳಸಿರುವ ವಿಚಾರ ತಮ್ಮ ಗಮನಕ್ಕೆ ಬಂದಿದ್ದು ಘಟನೆ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದು, ಸಂಬಂಧ ಪಟ್ಟ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ತರಿಸಿ ಕೊಂಡಿರುವುದಾಗಿ ತಿಳಿಸಿದ್ದಾರೆ
ಅಲ್ಲದೆ, ನಿಯಮ ಉಲ್ಲಂಘಿಸಿ ಮಕ್ಕಳನ್ನು ಇಂತಹ ಕೆಲಸಕ್ಕೆ ನಿಯೋಜಿಸಿಕೊಂಡಿರುವ ಬೂತ್ ಮಟ್ಟದ ಅಧಿಕಾರಿಗಳಿಗೆ (BLO) ಈಗಾಗಲೇ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮತ್ತೊಂದೆಡೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಚುನಾವಣಾ ಆಯೋಗದ ನಿಯಮಗಳ ಉಲ್ಲಂಘನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಆಧರಿಸಿ ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗು ವುದು ಎಂದು ತಿಳಿಸಿದ್ದಾರೆ. ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಇಲಾಖಾ ಮಟ್ಟದಲ್ಲಿ ಸೂಕ್ತ ಕ್ರಮ ಜರುಗಿಸುವ ಭರವಸೆಯನ್ನೂ ಜಿಲ್ಲಾಡಳಿತ ನೀಡಿದ್ದು ಏನೇನಾಗಲಿದೆ ಎಂಬುದನ್ನೂ ಕಾದು ನೋಡಬೇಕಿದೆ
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..



