ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಯನ್ನು ದಿನಾಂಕ 31-12-2022ರೊಳಗಾಗಿ ಪಾಸ್ ಮಾಡುವುದು ಕಡ್ಡಾಯವಾಗಿದೆ.ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಯನ್ನು ಹೊರಡಿಸಿದ್ದು ದಿನಾಂಕ 05-05-2022ರಲ್ಲಿ ಕರ್ನಾಟಕ ನಾಗರಿಕ ಸೇವಾ( ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2021ರ ನಿಯಮ 3(ಬಿ)ಕ್ಕೆ ಮಾಡಿ ರುವ ತಿದ್ದು ಪಡಿ ಅನ್ವಯ ದಿನಾಂಕ 31-12-2022ರೊಳಗೆ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ ಪಾಸ್ ಮಾಡುವುದು ಕಡ್ಡಾಯವೆಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ಈ ದಿನಾಂಕದಲ್ಲಿ ಯಾವುದೇ ಬದಲಾ ವಣೆ ಇಲ್ಲ.ಇದಕ್ಕಾಗಿ ಹೆಚ್ಚುವರಿ ಅನುದಾನ ಕೂಡ ಕಿಯೋ ನಿಕ್ಸ್ ಕೋರಬಾರದು.ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಯನ್ನು ದಿನಾಂಕ 01-04-2022 ರಿಂದ 31-12-2022 ರೊಳಗೆ ಮಾತ್ರ ವಿಸ್ತರಿಸಲು ಸರ್ಕಾರ ಆದೇಶಿಸಿದೆ ಎಂದಿದ್ದಾರೆ.