ಕಡಬ –
ಶಿಕ್ಷಕರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಇಲ್ಲಿನ ಸರಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ.ಕಡಬ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಅಬ್ದುಲ್ ಖಾದರ್ ಅವರು ನಮ್ಮ ಮೇಲೆ ತರಗತಿಯಲ್ಲಿ ಹಲ್ಲೆ ನಡೆಸಿದ್ದು ಕುತ್ತಿಗೆ ಹಿಡಿದು ಕೆನ್ನೆಗೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಅದರಿಂದಾಗಿ ಕುತ್ತಿಗೆ ನೋವಾಗಿದ್ದು ಕೆನ್ನೆ ಊದಿಕೊಂಡಿದೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು ಶಿಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿ ಕಾರಿಗೆ ದೂರು ನೀಡಿ ಆಗ್ರಹಿಸಿದ್ದಾರೆ.ಘಟನೆಯ ಕುರಿತು ಪ್ರತಿಕ್ರಿಯಿ ಸಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ. ಅವರು ಪ್ರಕರಣ ನನ್ನ ಗಮನಕ್ಕೆ ಬಂದಿದೆ.ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸ್ಥಳೀಯ ಶಿಕ್ಷಣ ಸಂಯೋಜ ಕರಿಗೆ ಸೂಚನೆ ನೀಡಲಾಗಿದೆ.ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಚಿಂತಿಸಲಾಗುವುದು ಎಂದರು.
ಇತ್ತ ಆಸ್ಪತ್ರೆಗೆ ಭೇಟಿ ನೀಡಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಮುಖಂಡರು ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಶಿಕ್ಷಕನ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಜರಗಿಸಬೇಕು.ಅವರನ್ನು ಸೇವೆಯಿಂದ ವಜಾ ಮಾಡ ಬೇಕು ಎಂದು ಅಗ್ರಹಿಸಿ ಕಡಬ ತಹಶೀಲ್ದಾರ್ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.