ಉಡುಪಿ –
ಹೌದು ಪಾಠ ಮಾಡುತ್ತಿರುವಾಗಲೇ ಚಿತ್ರಕಲಾ ಶಿಕ್ಷಕ ರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ ಖಾಸಗಿ ಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದ ಶಿಕ್ಷಕರೊಬ್ಬರು ಹೃದಯಾಘಾ ತದಿಂದ ಶಾಲೆಯಲ್ಲೇ ಮೃತಪಟ್ಟಿದ್ದಾರೆ.
44 ವರ್ಷದ ಆನಂದ್ ಜಿ.ಗಂಧದ್ ಹೃದಯಾಘಾತದಿಂದ ಮೃತಪಟ್ಟಿರುವ ಶಿಕ್ಷಕರಾಗಿದ್ದು.ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿತ್ರಕಲಾ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು. ಎದೆನೋವು ಕಾಣಿಸಿಕೊಂಡಿದೆ.ಹೀಗಾಗಿ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ನಂತರ ಅವರನ್ನು ಮಣಿಪಾಲ್ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.