ಬೆಂಗಳೂರು –
ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ಹಾಗೂ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ ಆರೋಪದಲ್ಲಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಕೆ.ಎಸ್. ಬೈರಪ್ಪ ಅವರನ್ನು ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ ರೇವತಿ ಎಂಬುವರು ನೀಡಿದ ದೂರು ಆಧರಿಸಿ ಕೆ.ಎಸ್.ಬೈರಪ್ಪ ಅವರನ್ನು ಬಂಧಿಸಲಾಗಿದೆ.ಕೃತ್ಯ ನಡೆದ ಸ್ಥಳ ಆಧರಿಸಿ ತಾವರೆಕೆರೆ ಪೊಲೀಸರಿಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಮುಂದಿನ ತನಿಖೆಯನ್ನು ಅಲ್ಲಿನ ಪೊಲೀಸರು ನಡೆಸಲಿದ್ದಾರೆ ಎಂದು ನೈರುತ್ಯ ವಿಭಾಗದ ಡಿಸಿಪಿ ಅನಿತಾ ಹದ್ದಣ್ಣನವರ್ ತಿಳಿಸಿದ್ದಾರೆ.
ಬೈರಪ್ಪ ಅವರು ಸದ್ಯ ನಗರ ಪೊಲೀಸ್ ಕಮಿಷನರ್ ಕಚೇರಿಯ ಕಂಟ್ರೋಲ್ ರೂಮ್ ವಿಭಾಗದಲ್ಲಿ ಪಿಎಸ್‌ಐ ಆಗಿ ಕೆಲಸ ಮಾಡುತ್ತಿದ್ದಾರೆ.ಆರಂಭದಲ್ಲಿ ಕೆಂಗೇರಿ ಠಾಣೆಯ ಪೊಲೀಸರಿಗೆ ರೇವತಿ ದೂರು ನೀಡಿದ್ದರು ಆ ದೂರು ಆಧರಿಸಿ ಪೊಲೀಸರು ಜುಲೈ 13ರಂದು ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡಿದ್ದರು ಬಳಿಕ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದ್ದ ರೇವತಿ, ಪತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು
ಇದೀಗ ಎಫ್‌ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚನಾಪುರ ನಿವಾಸಿಯಾಗಿರುವ ಬೈರಪ್ಪ ಅವರು ಐದು ವರ್ಷದ ಹಿಂದೆ ರೇವತಿ ಅವರನ್ನು ಮದುವೆ ಆಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗುವಿದೆ.
‘ತಾನು ಪಿಎಸ್‌ಐ ಆಗಿದ್ದು, ಮದುವೆ ವೇಳೆ ವರದಕ್ಷಿಣೆ ಕೊಟ್ಟಿಲ್ಲ. ತವರು ಮನೆಯಿಂದ ₹50 ಲಕ್ಷ ತೆಗೆದುಕೊಂಡು ಬರುವಂತೆ ಒತ್ತಾಯಿಸಿ ಮೇಲೆ ಹಲ್ಲೆ ಮಾಡಿದ್ದಾರೆ. ಪತಿ ಮನೆಯವರೂ ಸಹ ಕಿರುಕುಳ ನೀಡಿದ್ದಾರೆ. ಪ್ರಶ್ನಿಸಿದಕ್ಕೆ ನನ್ನ ತಂದೆಗೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಬೆದರಿಸಿದ್ದರು’ ಎಂದು ರೇವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವರದಕ್ಷಿಣೆ ವಿಚಾರಕ್ಕಾಗಿ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡಿದ್ದಾರೆ. ಬೇರೆ ಯುವತಿಯ ಜತೆಗೆ ಸಲುಗೆ ಇದೆ ಅದನ್ನು ಪ್ರಶ್ನಿಸಿದ್ದಕ್ಕೆ ವಿಚ್ಛೇದನ ನೀಡುವಂತೆ ತಾಕೀತು ಮಾಡಿದ್ದಾರೆ ಎಂದು ರೇವತಿ ದೂರಿದ್ದಾರೆ.ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



