ದಕ್ಷಿಣ ಕನ್ನಡ –
ಕರಾವಳಿಯಲ್ಲಿ ಮತ್ತೆ ವರುಣನ ಆಗಮನವಾಗಿದೆ. ಕಳೆದ 10 ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮತ್ತೆ ಅಬ್ಬರಿಸೋದಕ್ಕೆ ಶುರು ಮಾಡಿದ್ದಾನೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಯಿಂದಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು
ಮುನ್ನಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದ.ಕ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ದಕ್ಷಿಣ ಕನ್ನಡ…..



