ಶಿವಮೊಗ್ಗ –
ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಬೇದಿಕೆ ಇಟ್ಟಿದ್ದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ನಾಮದೇವ ಲೋಕಾಯುಕ್ತ ಬಲೆಗೆ ಬಿದ್ದವರು.ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿ ಕೊಳ್ಳಲು ನಾಮದೇವ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಶಾಲೆಗೆ ಡ್ರಮ್ ಸೆಟ್ ಬೇಕು ಎಂಬ ನೆಪದಲ್ಲಿ ಲಂಚ ಕೇಳಿದ್ದರು. ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿ ಯನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್, ಇನ್ಸ್ಪೆಕ್ಟರ್ ರುದ್ರೇಶ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದ್ದು, ತನಿಖೆ ಮುಂದುವರೆದಿದೆ.
ಸುದ್ದಿ ಸಂತೆ ನ್ಯೂಸ್ ಶಿವಮೊಗ್ಗ…..



