ನವದೆಹಲಿ –
ಪ್ರ ಶ್ನೆ ಪತ್ರಿಕೆ ಲೀಕ್ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ ಪ್ರಧಾನಿ ಮೋದಿ ಘೋಷಣೆ ಹೌದು ದೇಶದ ಯುವ ಜನರ ಹಿತಾಸಕ್ತಿ ಮತ್ತು ಅವರ ಭವಿಷ್ಯವೇ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ತಪ್ಪಿತಸ್ಥರಿಗೆ ಶೀಘ್ರದಲ್ಲೇ ಕಠಿಣ ಶಿಕ್ಷೆ ವಿಧಿಸಲು ಮಹತ್ವದ ಹೆಜ್ಜೆ ಇಟ್ಟಿದೆ.ಈ ರೀತಿಯ ಪ್ರಕರಣಗಳ ಶೀಘ್ರ ವಿಚಾರಣೆ ಮತ್ತು ವಿಲೇವಾರಿಗಾಗಿ ‘ಫಾಸ್ಟ್ ಟ್ರ್ಯಾಕ್’ ನ್ಯಾಯಾಲಯಗಳನ್ನು ಸ್ಥಾಪಿಸಲು ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ.

ಈ ಸಂಬಂಧ ತಕ್ಷಣವೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ವಿದ್ಯಾರ್ಥಿ ಸಮುದಾಯದ ಹಿತರಕ್ಷಣೆಗಾಗಿ ಸರ್ಕಾರ ಸರಣಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ ಅದರಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿದೆ. ಯುವ ಜನರ ಉಜ್ವಲ ಭವಿಷ್ಯದ ಜೊತೆ ಆಟವಾಡುವ ಯಾವುದೇ ವ್ಯಕ್ತಿಯನ್ನು ಎಷ್ಟೇ ಪ್ರಭಾವಿಯಾಗಿದ್ದರೂ ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಸಂಬಂಧಿ ಸಿದ ಪ್ರಕರಣಗಳ ಶೀಘ್ರ ವಿಚಾರಣೆ ಹಾಗೂ ಶೀಘ್ರ ವಿಲೇವಾರಿ ಗಾಗಿ ದೇಶಾದ್ಯಂತ ವಿಶೇಷ ‘ಫಾಸ್ಟ್ ಟ್ರ್ಯಾಕ್’ ನ್ಯಾಯಾಲಯಗ ಳನ್ನು ಸ್ಥಾಪಿಸಲು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಈ ನಿರ್ಧಾರ ವನ್ನು ತಕ್ಷಣದಿಂದಲೇ ಜಾರಿಗೆ ತರಲು ಸಂಬಂಧಪಟ್ಟ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ವಿದ್ಯಾರ್ಥಿ ಸಮುದಾಯದ ನಂಬಿಕೆ ಮತ್ತು ಶ್ರಮವನ್ನು ಉಳಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿರುವ ಪ್ರಧಾನಿಯವರು, ಯುವಜನರ ಉಜ್ವಲ ಭವಿಷ್ಯದ ಜೊತೆ ಆಟವಾಡುವ ದೇಶದ್ರೋಹಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಹೊಸ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ಸ್ಥಾಪನೆಯಿಂದ ನೀಟ್ (NEET) ಸೇರಿದಂತೆ ಪ್ರಮುಖ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷಾ ಅಕ್ರಮಗಳ ತನಿಖೆಗೆ ಆನೆಬಲ ಬರಲಿದೆ. ಪ್ರಕರಣಗಳ ವಿಚಾರಣೆ ವೇಗವಾಗಿ ನಡೆದು, ತಪ್ಪಿತಸ್ಥರು ಕಾನೂನಿನ ಬಲೆಗೆ ಬೀಳುವುದರಿಂದ, ಹಾಳಾಗಿದ್ದ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆ ವಿದ್ಯಾರ್ಥಿಗಳಲ್ಲಿ ಮತ್ತೆ ಚಿಗುರಲಿದೆ ಎಂದು ಸರ್ಕಾರ ಭರವಸೆ ನೀಡಿದೆ.
ಸುದ್ದಿ ಸಂತೆ ನ್ಯೂಸ್ ನವದೆಹಲಿ…..



