ಉಡುಪಿ,ದಕ್ಷಿಣ ಕನ್ನಡ –
ಹೌದು ಈ ಎರಡು ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿ ರುವಂತ ಭಾರೀ ಮಳೆಯಿಂದಾಗಿ ಜನತೆ ತತ್ತರಿಸಿ ಹೋಗಿ ದ್ದಾರೆ.ಈ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಅನೇಕ ಪ್ರದೇ ಶಗಳು ಜಲಾವೃತಗೊಂಡಿವೆ.ಇನ್ನೂ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನಅಸ್ತವ್ಯಸ್ಥಗೊಂಡಿದ್ದು ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದ ಕಾರಣ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾತ್ರಿಯಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೇ ಭಾರಿ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಮುಂದುವರೆದ ಕಾರಣ ರಸ್ತೆಗಳೆಲ್ಲಾ ಜಲಾವೃತಗೊಂಡು ಜನಜೀವು ಜಿಲ್ಲೆಯಲ್ಲಿ ಅಸ್ತವ್ಯಸ್ಥಗೊಂ ಡಿದೆ.ನಾಳೆಯೂ ಭಾರೀ ಮಳೆಯ ಮುನ್ಸೂಚನೆ,ಆರೆಂಜ್ ಅಲರ್ಟ್ ಅನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶಿಸಿದ್ದಾರೆ.ಮತ್ತೊಂದೆಡೆ ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಸುರಿಯುತ್ತಿರುವಂತ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶಿಸಿದ್ದಾರೆ.