ಬೆಂಗಳೂರು –
ರಾಜ್ಯದ ಹಲವು ಕಡೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ ಮೂರು ನಾಲ್ಕು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ಸು ನಾಳೆ ರಾಜ್ಯದ ಹಲವು ಕಡೆಗಳಲ್ಲಿ ಮತ್ತೆ ರಜೆ ನೀಡಲಾಗಿದೆ
ನಾಳೆ ಉತ್ತರ ಕನ್ನಡ ಜಿಲ್ಲೆಯ 3 ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ ಅಂಗನವಾಡಿ ಮಕ್ಕಳಿಗೂ ರಜೆ ರಜೆ ಘೋಷಣೆ ಮಾಡಲಾಗಿದ್ದು ಮಳೆ (Rain) ಚುರುಕುಗೊಂಡಿದೆ. ಕಳೆದ 15 ದಿನಗಳಿಂದ ಕಣ್ಮರೆಯಾಗಿದ್ದ ವರುಣ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆ ಗಳಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ.
ಅದರಲ್ಲೂ ಕರಾವಳಿ (Coastal) ಮತ್ತು ಮಲೆನಾಡು (Malenadu) ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಕನ್ನಡ (Uttara Kannada) ಜಿಲ್ಲೆಯ ಈ ಮೂರು ತಾಲೂಕಿನ ಅಂಗನವಾಡಿ ಮತ್ತು ಶಾಲೆಗಳಿಗೆ ಶುಕ್ರವಾರ ರಜೆ (Holiday) ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಈ ತಾಲೂಕಿನ ಶಾಲೆ ಮತ್ತು ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಡಿಸಿ ಲಕ್ಷ್ಮಿ ಪ್ರಿಯಾ ಅವರು ಅಂಗನ ವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿ ಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಉತ್ತರ ಕನ್ನಡ…..



