ಕನ್ನಡಿಗ ಪ್ರಹ್ಲಾದ್ ಜೋಶಿ ನೂತನ ಕೇಂದ್ರ ಶಿಕ್ಷಣ ಸಚಿವ – ಹೆಚ್ಚುವರಿ ಮತ್ತೊಂದು ಜವಾಬ್ದಾರಿ…..ಧರ್ಮೇಂದ್ರ ಪ್ರಧಾನ್ ಕಾರ್ಯ ಸಾಧನೆಯನ್ನು ಶ್ವಾಘಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ….

Suddi Sante Desk
ಕನ್ನಡಿಗ ಪ್ರಹ್ಲಾದ್ ಜೋಶಿ ನೂತನ ಕೇಂದ್ರ ಶಿಕ್ಷಣ ಸಚಿವ – ಹೆಚ್ಚುವರಿ ಮತ್ತೊಂದು ಜವಾಬ್ದಾರಿ…..ಧರ್ಮೇಂದ್ರ ಪ್ರಧಾನ್ ಕಾರ್ಯ ಸಾಧನೆಯನ್ನು ಶ್ವಾಘಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ….

ನವದೆಹಲಿ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಒಂದು ಹುದ್ದೆಗೆ ಕನ್ನಡಿಗ ಪ್ರಹ್ಲಾದ್ ಜೋಶಿ ಅವರನ್ನು ನೂತನ ಕೇಂದ್ರ ಶಿಕ್ಷಣ ಸಚಿವ ರನ್ನಾಗಿ ನೇಮಕ ಮಾಡಲಾಗಿದೆ ಹೌದು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವೀಕರಿಸಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಶಿಕ್ಷಣ ಸಚಿವಾಲಯದ ತಾತ್ಕಾಲಿಕ ಸಚಿವರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ಪ್ರಧಾನಮಂತ್ರಿಗಳ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಯನ್ನು ಅಂಗೀಕರಿಸಿದ್ದಾರೆ. ಪ್ರಧಾನಿಯವರ ಶಿಫಾರಸಿನಂತೆ ಸಂಪುಟ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ತಮ್ಮ ಹಾಲಿ ಇಲಾಖೆಗಳ ಜೊತೆಗೆ ಹೆಚ್ಚುವರಿಯಾಗಿ ಶಿಕ್ಷಣ ಸಚಿವಾಲಯದ ಉಸ್ತುವಾರಿಯನ್ನು ವಹಿಸಲು ರಾಷ್ಟ್ರಪತಿಗಳು ನಿರ್ದೇಶಿಸಿದ್ದಾರೆ

ಕರ್ನಾಟಕದ ಧಾರವಾಡ ಲೋಕಸಭಾ ಕ್ಷೇತ್ರದ ಹಿರಿಯ ಬಿಜೆಪಿ ಸಂಸದರಾಗಿರುವ ಜೋಶಿ ಅವರು, ಪ್ರಸ್ತುತ ಕೇಂದ್ರದಲ್ಲಿ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯಗಳ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ಇನ್ನೂ ಧರ್ಮೇಂದ್ರ ಪ್ರಧಾನ್ ಅವರ ಕಾರ್ಯಕ್ಕೆ ಜೋಶಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಅಧಿಕಾರ ವಹಿಸಿಕೊಂಡ ಬಳಿಕ ಧರ್ಮೇಂದ್ರ ಪ್ರಧಾನ್ ಅವರ ದಶಕಗಳ ಸುದೀರ್ಘ ರಾಜಕೀಯ ಜೀವನ ಮತ್ತು ಸಾಧನೆಯನ್ನು ಪ್ರಲ್ಹಾದ್ ಜೋಶಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಭಾರತದ ಅಭಿವೃದ್ಧಿಗೆ ಪ್ರಧಾನ್ ಅವರು ನೀಡಿದ ಕೊಡುಗೆಯನ್ನು ದೇಶ ಸದಾ ನೆನಪಿಸಿಕೊಳ್ಳಲಿದೆ ಎಂದಿದ್ದಾರೆ.

ತಮ್ಮ ಸಾಮಾಜಿಕ ಮಾಧ್ಯಮ ಖಾತೆ ‘X’ (ಟ್ವಿಟರ್) ನಲ್ಲಿ ಬರೆದು ಕೊಂಡಿರುವ ಜೋಶಿ, “ಅವರ ಆಡಳಿತಾವಧಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP 2020) ಯಶಸ್ವಿಯಾಗಿ ಅನುಷ್ಠಾನಗೊಂಡಿ ದ್ದಲ್ಲದೆ, ಶಿಕ್ಷಣ ಕ್ಷೇತ್ರದಲ್ಲಿ 100 ಕ್ಕೂ ಹೆಚ್ಚು ದೊಡ್ಡ ಮತ್ತು ಸಣ್ಣ ಸುಧಾರಣೆಗಳು ಬಂದವು ಎಲ್ಲಕ್ಕಿಂತ ಹೆಚ್ಚಾಗಿ ದೇಶದ ಹಿತಾ ಸಕ್ತಿಗೆ ಆದ್ಯತೆ ನೀಡಿ ಹುದ್ದೆಯಿಂದ ಕೆಳಗಿಳಿಯುವ ಪ್ರಧಾನ್ ಜಿ ಅವರ ತೀರ್ಮಾನವು

 

ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡುವ ಕೊಡುಗೆಗೆ ಯಾವುದೇ ರೀತಿಯಲ್ಲೂ ತಡೆಯಾಗುವುದಿಲ್ಲ ಎಂದು ಹೆಮ್ಮೆ ವ್ಯಕ್ತಪಡಿಸಿ ದ್ದಾರೆ ಅಲ್ಲದೆ, ಭಾರತದ ವಿಕಾಸದ ಹಾದಿಯಲ್ಲಿ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮತ್ತೆ ಜೊತೆಯಾಗಿ ಕೆಲಸ ಮಾಡುವ ಅವಕಾಶ ಸಿಗಲಿದೆ ಎಂಬ ಭರವಸೆಯನ್ನು ಜೋಶಿ ವ್ಯಕ್ತಪಡಿಸಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ನವದೆಹಲಿ…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.