ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗೊಂದಲಕ್ಕೆ ತೆರೆ ಎಳೆದ ಮಂಜುನಾಥ ಮಕ್ಕಳಗೇರಿ – ಸರಳತೆಯ ಸಾಹುಕಾರ್ ಮಧ್ಯಸ್ಥಿಕೆಯಲ್ಲಿ ನಡೆಯಿತು ಯಶಸ್ವಿ ಮಾತುಕತೆ…..

Suddi Sante Desk
ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಗೊಂದಲಕ್ಕೆ ತೆರೆ ಎಳೆದ ಮಂಜುನಾಥ ಮಕ್ಕಳಗೇರಿ – ಸರಳತೆಯ ಸಾಹುಕಾರ್ ಮಧ್ಯಸ್ಥಿಕೆಯಲ್ಲಿ ನಡೆಯಿತು ಯಶಸ್ವಿ ಮಾತುಕತೆ…..

ಧಾರವಾಡ

ಧಾರವಾಡ ತಾಲೂಕಿನ ನಿಗದಿ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಬಿಜೆಪಿ ಗ್ರಾಮೀಣ ಮುಖಂಡ ಮಂಜುನಾಥ ಮಕ್ಕಳಗೇರಿ ಅವರ ನೇತೃತ್ವದಲ್ಲಿ ಗ್ರಾಮದ ಗುರು-ಹಿರಿಯರು ಹಾಗೂ ಯುವಕರ ಪ್ರಮುಖ ಸಭೆ ಯಶಸ್ವಿಯಾಗಿ ನಡೆಯಿತು.ಗ್ರಾಮದ ಜಗಜ್ಯೋತಿ ಬಸವೇಶ್ವರರ ಮೂರ್ತಿಯ ಪಕ್ಕದಲ್ಲೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಗ್ರಾಮದ ಸುದೀರ್ಘ ಇತಿಹಾಸ, ದೇಶಭಕ್ತಿ ಹಾಗೂ ಮುಂಬರುವ ಯುವಜನತೆಗೆ ರಾಯಣ್ಣನವರ ಶೌರ್ಯ ಮತ್ತು ತ್ಯಾಗ ಪ್ರೇರಣೆ ಯಾಗಬೇಕು ಎಂಬ ಉದ್ದೇಶದಿಂದ ಈ ಮೂರ್ತಿ ಸ್ಥಾಪನೆ ಅತ್ಯ ಗತ್ಯ ಎಂದು ಸಭೆಯಲ್ಲಿದ್ದ ಪ್ರಮುಖರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.ಸಭೆಯ ನಂತರ ಬಿಜೆಪಿ ಮುಖಂಡ ಮಂಜುನಾಥ ಮಕ್ಕಳಗೇರಿ ಹಾಗೂ ಗ್ರಾಮಸ್ಥರು ಒಟ್ಟಾಗಿ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದರು.

ರಾಯಣ್ಣ ಅವರ ಭವ್ಯ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯವಿರುವ ಸರಕಾರಿ ಅನುಮತಿ ಹಾಗೂ ಸೂಕ್ತ ಸ್ಥಳಾವಕಾಶವನ್ನು ಶೀಘ್ರವೇ ಕಲ್ಪಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ಗ್ರಾಮಸ್ಥರು ಒತ್ತಾಯಿ ಸಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಧಾರವಾಡ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.