ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ – 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್…..

Suddi Sante Desk
ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ – 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್…..

ಬಾಗಲಕೋಟೆ

ಲೋಕಾಯುಕ್ತ ಬಲೆಗೆ ಸರ್ಕಾರಿ ನೌಕರರೊಬ್ಬರು ಬಿದ್ದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ ಹೌದು ಬಾಗಲಕೋಟೆಯಲ್ಲಿ 40,000 ಲಂಚ ಸ್ವೀಕರಿಸುತ್ತಿದ್ದ ಖಜಾನೆ ಇಲಾಖೆ FDA ಲೋಕಾಯುಕ್ತ ಬಲೆಗೆ ಬಿದ್ದಿದ್ದು ಲಂಚ ಸ್ವೀಕರಿಸುತ್ತಿದ್ದ ವೇಳೆ ಖಜಾನೆ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಅಧಿಕಾರಿ ಯನ್ನು ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ವಿನಾಯಕ ಹಿರೇಮಠ ಎಂದು ಗುರುತಿಸಲಾಗಿದೆ.ಜಮಖಂಡಿಯ ಖಜಾನೆ ಇಲಾಖೆಯಲ್ಲಿ ಎಫ್‌ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು ಚೇತನ್ ತರತರಿ ಎಂಬುವವರ ಮಾವನ ನಿವೃತ್ತಿ ಪಿಂಚಣಿ ಮೊತ್ತವನ್ನು ಜಮಾ ಮಾಡುವ ಸಂಬಂಧದ ಕಡತವನ್ನು ಮುಂದುವರಿಸಲು ಆರೋಪಿಯು ₹70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ಬಳಿಕ ಮಾತುಕತೆಯ ನಂತರ ₹40 ಸಾವಿರಕ್ಕೆ ಒಪ್ಪಂದವಾ ಗಿದ್ದು, ದೂರುದಾರರಿಂದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.ಲೋಕಾಯುಕ್ತ ಅಧಿಕಾರಿಗಳು ಆರೋಪಿಯಿಂದ ಲಂಚದ ಹಣವನ್ನು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಲಂಚದ ವಿರುದ್ಧ ಲೋಕಾಯುಕ್ತ ನಡೆ ಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು ಸಾರ್ವಜನಿಕರು ಲಂಚಕ್ಕೆ ಬೇಡಿಕೆ ಬಂದರೆ ತಕ್ಷಣವೇ ಲೋಕಾಯುಕ್ತರಿಗೆ ದೂರು ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟೆ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.