ದಕ್ಷಿಣ ಕನ್ನಡ –
ಹೌದು ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆ ಎಡೆಬಿಡದೆ ಸುರಿಯುತ್ತಿದೆ.ಈ ಹಿನ್ನಲೆಯಲ್ಲಿ ಜನರು ಮನೆಯಿಂದ ಹೊರ ಬರಲಾಗದಂತ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸ ಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ.ಆರ್ಭಟಿಸುತ್ತಿರುವಂತ ವರ್ಷ ಧಾರೆಯ ಅಬ್ಬರಕ್ಕೆ ತಗ್ಗು ಪ್ರದೇಶಗಳು ಜಲಾವೃತಗೊಂ ಡಿವೆ.ಅಲ್ಲದೇ ಅಲ್ಲಲ್ಲಿ ಸೇತುವೆಯ ಮೇಲೆ ನೀರು ಹರಿದ ಪರಿಣಾಮ ಕೆಲ ಗ್ರಾಮಗಳಿಗೆ ರಸ್ತೆ ಸಂಪರ್ಕ ಕೂಡ ಕಡಿತ ಗೊಂಡಿದೆ.
ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.ಇನ್ನೂ ಕರಾವಳಿ ಭಾಗದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗ ಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಅಲ್ಲದೇ ಆರೇಂಜ್ ಅಲರ್ಟ್ ಕೂಡ ಘೋಷಣೆ ಮಾಡಿದೆ.