ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ – ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು…..

Suddi Sante Desk
ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ – ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು…..

ಬೆಂಗಳೂರು

ಮುಖ್ಯಮಂತ್ರಿ ಡಿಕೆಶಿ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಸಂತೋಷ ಲಾಡ್‌ ಅಧಿಕಾರ ವಹಿಸಿಕೊಂಡಿದ್ದಾರೆ ಅತ್ತ ಸಚಿವ ರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಇತ್ತ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ರಾಗಿರುವ ಅನಿಲ ಕುಮಾರ್ ಪಾಟೀಲ್ ಅವರು ಅಭಿನಂದನೆ ಸಲ್ಲಿಸಿದ್ದಾರೆ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂತೋಷ ಲಾಡ್ ಅವರನ್ನು ಜಿಲ್ಲಾ ಅಧ್ಯಕ್ಷ ಅನಿಲ ಪಾಟೀಲ್ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡ ಸಂತೋಷ ಲಾಡ್ ಅವರಿಗೆ ಶುಭ ಹಾರೈಸಿದ ಅನಿಲ ಪಾಟೀಲ್, ಅವರ ಮುಂದಿನ ಜನಪರ ಸೇವೆ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ಶುಭವಾಗಲಿ ಎಂದು ಹಾರೈಸಿದರು.

ಸಂತೋಷ ಲಾಡ್ ಅವರ ಅನುಭವ ಮತ್ತು ಜನಪರ ಕಾಳಜಿ ಯಿಂದ ಜಿಲ್ಲೆಯ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತಷ್ಟು ಆದ್ಯತೆ ದೊರೆಯುವ ವಿಶ್ವಾಸವಿದೆ ಎಂದು ಅನಿಲ ಪಾಟೀಲ್ ಆಶಯ ವ್ಯಕ್ತಪಡಿಸಿದರು.ನೂತನ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಜನರಿಗೆ ಪರಿಣಾಮಕಾ ರಿಯಾಗಿ ತಲುಪುವಂತೆ ಕಾರ್ಯನಿರ್ವಹಿಸಲಿ ಎಂದು ಅವರು ಶುಭ ಕೋರಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂತೋಷ ಲಾಡ್ ಅವರಿಗೆ ಅಭಿನಂದನೆ ಸಲ್ಲಿಸಿ, ನೂತನ ಜವಾಬ್ದಾರಿಗೆ ಶುಭ ಹಾರೈಸಿದರು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.