ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM – ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM…..

Suddi Sante Desk
ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM – ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ  CM…..

ಬೆಂಗಳೂರು

ಎರಡನೇ ಹಂತದಲ್ಲಿ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆಶಿ ಎಲ್ಲಾ ಸಚಿವರಿಗೆ ಜವಾಬ್ದಾರಿ ನೀಡಿದ್ದಾರೆ ಹೌದು ರಾಜ್ಯದಲ್ಲಿ ಅತಿವೃಷ್ಟಿ  ಬರ ಪರಿಶೀಲನೆಗೆ ಸಚಿವರಿಗೆ ಸಿಎಂ ಸೂಚನೆಯನ್ನು ನೀಡಿದ್ದಾರೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ ಮಾಡಿ ಆದೇಶವನ್ನು ಕೂಡಾ ಮಾಡಲಾಗಿದೆ ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ತಮ್ಮ ಸಹೋದ್ಯೋಗಿ ಸಚಿವರಿಗೆ ತಮಗೆ ಹಂಚಿಕೆ ಮಾಡಲಾಗಿ ರುವ ಜಿಲ್ಲೆಗಳಿಗೆ ತಕ್ಷಣವೇ ಪ್ರವಾಸ ಕೈಗೊಂಡು ಪರಿಸ್ಥಿತಿಯ ವಾಸ್ತವ ವರದಿ ನೀಡುವಂತೆ ಅಧಿಕೃತ ಸೂಚನೆ ನೀಡಿದ್ದಾರೆ.ಈ ಕುರಿತು ಸಚಿವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಗಳು, “ಸಚಿವರು ತಮಗೆ ವಹಿಸಿರುವ ಜಿಲ್ಲೆಗಳಿಗೆ ತಕ್ಷಣ ಭೇಟಿ ನೀಡಿ, ಪ್ರತಿಯೊಂದು ತಾಲೂಕುಗಳಲ್ಲಿನ ಪರಿಸ್ಥಿತಿಯನ್ನು ಖುದ್ದಾಗಿ ಪರಿವೀಕ್ಷಣೆ ನಡೆಸಬೇಕು.

ಬಳಿಕ ವಾಸ್ತವ ಸ್ಥಿತಿಯ ಸಮಗ್ರ ವರದಿಯನ್ನು ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಕ್ಷಣವೇ ಸಲ್ಲಿಸಬೇಕು” ಎಂದು ನಿರ್ದೇಶಿಸಿದ್ದಾರೆ ಇದರೊಂದಿಗೆ ಎಲ್ಲಾ ಸಚಿವರಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

 

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.