ರಾಯಚೂರು –
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ರಾಯಚೂರು ಜಿಲ್ಲಾ ಪ್ರವಾಸದಲ್ಲಿ ರಾಯಚೂರು, ಕೊಪ್ಪಳ,ಬಳ್ಳಾರಿ ಹಾಗೂ ವಿಜಯನಗರದ ಶಿಕ್ಷಣ ಅಧಿಕಾರಿಗಳ ಸಭೆ ನಡೆಸಿದರು.
ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಸಭೆಯಲ್ಲಿ ಡಿಡಿಪಿಐ ಮತ್ತು ಬಿಇಒಗಳು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ಗುಣಮಟ್ಟವನ್ನು ನಿರಂತರವಾಗಿ ಗಮನಿಸಬೇಕು.ತರಗತಿಯಲ್ಲಿ ಕುಳಿತುಕೊಂಡು ಶಿಕ್ಷಕರ ಬೋಧನಾ ಮಟ್ಟವನ್ನು ಗಮನಿಸಿ ಅವರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕು ಹೇಳಿದರು.