ಧಾರವಾಡ –
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ತಾಲೂಕು ಆರೋಗ್ಯಾಧಿಕಾರಿ ಗಳ ಕಚೇರಿ ಮತ್ತು ಕೆ.ಎಲ್.ಇ ಸಂಸ್ಥೆಯ ಶ್ರೀ ಮೃತ್ಯುಂ ಜಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಇಂದು ಮೃತ್ಯುಂಜಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಶ್ವ ಜನಸಂ ಖ್ಯಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಿ.ಸಿ ಕರಿಗೌಡರ ಮಾತನಾಡಿ ಗಂಡಿಗೆ 21 ವರ್ಷ ಹೆಣ್ಣಿಗೆ 18 ವರ್ಷ ತುಂಬಿರಬೇಕು.ಮದುವೆಯಾದ ನಂತರ ಕನಿಷ್ಠ 3 ವರ್ಷಗಳವೆರಗೂ ಮೊದಲನೆ ಮಗುವನ್ನು ಪಡೆಯಬಾರದು ಜನನಗಳ ನಡುವೆ ಕನಿಷ್ಠ 4 ವರ್ಷಗಳ ಅಂತರವಿರಬೇಕು ಮತ್ತು ಎಲ್ಲಾ ಅರ್ಹ ದಂಪತಿಗಳು ಕುಟುಂಬ ಕಲ್ಯಾಣ ವಿಧಾನಗಳನ್ನು ಅನುಸರಿಸಿ ಚಿಕ್ಕ ಕುಟುಂಬವನ್ನು ರೂಪಿಸಿಕೊಳ್ಳಬೇಕು.ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಪುರುಷರ ಸಕ್ರೀಯ ಭಾಗವಹಿಸುವಿಕೆ
ಒಳಗೊಂಡಂತೆ ಸಮುದಾಯದ ಸಹಭಾಗಿತ್ವ ಬಹಳ ಮುಖ್ಯವಾಗಿದೆ.ಯುವ ಜನತೆಯ ಸಬಲೀಕರಣ ಮತ್ತು ಶಿಕ್ಷಣ ಬಹಳ ಮುಖ್ಯವಾಗಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿ ಜನಸಂಖ್ಯಾ ನಿಯಂತ್ರಣದ ಬಗ್ಗೆ ಪ್ರಚಾರ ಮಾಡಲು ವಾಹನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಿ.ಸಿ ಕರಿಗೌಡರ ಹಸಿರು ನಿಶಾನೆ ತೋರಿಸುವುದರ ಮುಖಾಂತರ ಚಾಲನೆ ನೀಡಿದರು.
ಮೃತ್ಯುಂಜಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎನ್.ಸಿ.ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಬಿ.ನಿಂಬಣ್ಣವರ,ಡಾ ಸವಿತಾ,ತಾಲೂಕಾ ಆರೋಗ್ಯಾಧಿಕಾರಿ ಡಾ.ತನುಜಾ.ಕೆ.ಎನ್,ಆರೋಗ್ಯ ಇಲಾಖೆ ಸಿಬ್ನಂದಿಗಳು,ಮಹಾವಿದ್ಯಾಲಯದ ಉಪನ್ಯಾಸಕ ನಾಗರಾಜ ಕೊಟಗಾರ,ಡಾ ತಾರಾ ಒ.ಎನ್,ಉಮೇಶ ನೀಲಪ್ಪನವರ ಹಾಗೂ ಎಲ್ಲ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.