ಚಿತ್ರದುರ್ಗ –
ಮಕ್ಕಳಲ್ಲಿರುವ ಅಪೌಷ್ಟಿಕತೆ ಹೋಗಲಾಡಿಸುವ ನಿಟ್ಟಿನಲ್ಲಿ ಪೂರಕ ಪೌಷ್ಟಿಕ ಆಹಾರ ಒದಗಿಸುವುದು ಬಹಳ ಮುಖ್ಯ ವಾಗಿದೆ.ಮಕ್ಕಳಿಗೆ ಕಳಪೆ ಮೊಟ್ಟೆ ಹಾಗೂ ಬಾಳೆ ಹಣ್ಣು ಕೊಟ್ಟರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
ನಗರದ ಐಯುಡಿಪಿ ಲೇಔಟ್ನ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ 1 ರಿಂದ 7ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು,ಶೇಂಗಾಚಿಕ್ಕಿ ಆಹಾರ ವಿತರಣಾ ಕಾರ್ಯಕ್ರ ಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪೌಷ್ಟಿಕ ಆಹಾರದ ವಿಚಾರದಲ್ಲಿ ಉದಾಸೀನ ತೋರಬಾರದು ಎಂದರು.