ಹುಬ್ಬಳ್ಳಿ –
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಗೇರಿ ಯಲ್ಲಿ ನಡೆದಿದೆ.ಗುಡಗೇರಿ ಗ್ರಾಮದ ಬಾಹುಬಲಿ ಎಂಬಾ ತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ
ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಮಾನಸಿಕವಾಗಿ ನೊಂದಿದ್ದ ಬಾಹುಬಲಿ ನಿನ್ನೆ ತಡ ರಾತ್ರಿ ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.