ಬೆಂಗಳೂರು –
ಹೌದು ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿರು ವವವರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕ ದ್ದಮೆ ಹೂಡುತ್ತೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ಹೇಳಿದರು ಬೆಂಗ ಳೂರಿನಲ್ಲಿ ಮಾತನಾಡಿದ ಅವರು ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರ ರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ.ಆದರೆ ಈ ಕುರಿತು ನಮ್ಮ ಕಚೇರಿಗೆ ಯಾವುದೇ ದೂರುಗಳನ್ನು ನೀಡಿಲ್ಲ.ಆಯುಕ್ತರ ಕಚೇರಿಗೂ ಯಾವುದೇ ದೂರು ನೀಡಿಲ್ಲ.ಸಾಕ್ಷ್ಯಾಧಾರಗಳ ಸಮೇತ ದೂರು ನೀಡಿದರೆ ಈ ಬಗ್ಗೆ ಸಂಬಂಧಿಸಿದವರ ವಿರುದ್ಧ ಸೂಕ್ತ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ನಮ್ಮ ಕಚೇರಿಗೆ ದೂರು ನೀಡಲಾಗದಿದ್ದರೆ ತನಿಖಾ ಸಂಸ್ಥೆ ಗಳು ನ್ಯಾಯಾಲಯಗಳಿಗೂ ದೂರು ನೀಡಬಹುದು. ಸಾಕ್ಷ್ಯಾಧಾರ ಸಹಿತ ದೂರು ನೀಡುವುದನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ.ಆದರೆ ಆಧಾರ ರಹಿತ ಆರೋಪ ಮಾಡು ವುದು ಬೇಜವಾಬ್ದಾರಿತನದ ಪರಮಾವಧಿ ಎಂದರು
ಯಾವುದೇ ಖಾಸಗಿ ಶಾಲೆ ಮತ್ತು ಆ ಶಾಲೆಗಳಲ್ಲಿ ಕಲಿ ಯುತ್ತಿರುವ ಮಕ್ಕಳಿಗೆ ಯಾವುದೇ ರೀತಿಯಿಂದಲೂ ತೊಂದರೆಯಾಗದಂತೆ ಸರ್ಕಾರ ಕ್ರಮ ವಹಿಸಲಿದೆ.ಆದರೆ ಶಾಲೆಗಳು ಕರ್ನಾಟಕ ಶಿಕ್ಷಣ ಕಾಯ್ದೆ ಮತ್ತು ಸುಪ್ರೀಂ ಕೋರ್ಟ್ ನಿರ್ದೇಶನಗಳು, ಮಾರ್ಗಸೂಚಿ ಅನುಸಾರ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದರು.
ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಇಲಾಖೆಗಳ ಚರ್ಚಿಸಿ ಶಾಲಾ ಕಟ್ಟಡ ಮತ್ತು ಅಗ್ನಿ ಸುರಕ್ಷತೆ ಪರಿಶೀಲನೆ ಪ್ರಕ್ರಿಯೆಯನ್ನು ಸರಳೀಕರಿಸ ಲಾಗಿದೆ. ಶಾಲಾ ಕಟ್ಟಡಗಳ ಸುರಕ್ಷತೆ ಕುರಿತು ಪರಿಶೀಲನೆ ಯನ್ನು ಈ ಹಿಂದೆ ಕಾರ್ಯನಿರ್ವಾಹಕ ಅಭಿಯಂತರರು ಮಾಡುತ್ತಿದ್ದರು.ಇದನ್ನು ಬದಲಾವಣೆ ಮಾಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಿಗೆ ಅಧಿಕಾರ ವಿಕೇಂದ್ರೀ ಕರಿಸಲಾಗಿದೆ ಎಂದರು