ಬೆಂಗಳೂರು –
ಹೌದು ಕೊನೆಗೂ ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿದ್ದು ರಾಜ್ಯಸ ಸರ್ಕಾರಿ ನೌಕರರಿಗೆ ವೇತನ ಆಯೋಗವನ್ನು ಸೆಪ್ಟೆಂಬರ್ 6 ರಂದು ಘೋಷಣೆ ಮಾಡಲಿದ್ದು ಇದರ ಸಿದ್ದತೆ ಯನ್ನು ಸರ್ಕಾರ ಈಗಾಗಲೇ ಮಾಡಿಕೊಂಡಿದ್ದು ಸೆಪ್ಟೆಂಬರ್ 6 ರಂದು ಘೋಷಣೆ ಮಾಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ
ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ.ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂಬ ಮಾಹಿತಿ ರಾಜ್ಯದ ಸರ್ಕಾರಿ ನೌಕರರ ಸಂಘಟನೆ ಮತ್ತು ಮುಖ್ಯ ಮಂತ್ರಿ ಕಚೇರಿಯಿಂದ ಕೇಳಿ ಬಂದಿದೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಟ್ಟದ ನಿವೃತ್ತಿ ಅಧಿಕಾರಿಯೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡ ಲಾಗುತ್ತದೆ.ಪ್ರಧಾನ ಕಾರ್ಯದರ್ಶಿ ಮಟ್ಟದ ಅಧಿಕಾರಿ ಯನ್ನು ಆಯೋಗದ ಸದಸ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗುತ್ತದೆ.ಆಯೋಗದ ವರದಿ ಬಂದ ಕೂಡಲೇ ರಾಜ್ಯದ ಸರ್ಕಾರಿ ನೌಕರರಿಗೆ ವೇತನ ಆಯೋಗದ ಶಿಫಾರಸು ಘೋಷಣೆಯಾಗಲಿದೆ.