ಮಂಗಳೂರು –
ಗಣಪತಿ ವಿಗ್ರಹದ ವಿಸರ್ಜನೆ ನೆಪದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೆ.2 ರಂದು ಶಾಲಾ,ಕಾಲೇಜು ಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ ಹೀಗಾಗಿ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹದ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುವುದರಿಂದ ಈ ಸಮಯದಲ್ಲಿ ಹಚ್ಚಿನ ಜನದಟ್ಟಣೆ ಹಾಗೂ ವಾಹನ ದಟ್ಟಣೆ ಜಾಸ್ತಿಯಾಗುವ ಸಂಭವವಿರು ತ್ತದೆ.ಹೀಗಾಗಿ ಅಂಗನವಾಡಿ ಕೇಂದ್ರಗಳಿಗೆ,ಪ್ರಾಥಮಿಕ ಮತ್ತು ಪ್ರೌಢ ಶಾಲೆ,ಪದವಿ ಪೂರ್ವ ಸ್ನಾತಕೊತ್ತರ ಪದವಿ, ಡಿಪ್ಲೋಮಾ,ಐ.ಟಿ.ಐ ಸೇರಿದಂತೆ ಎಲ್ಲಾ ಸರ್ಕಾರಿ ಅನುದಾ ನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಸೆ 2 ರಂದು ರಜೆ ಯನ್ನು ಘೋಷಿಸಲಾಗಿದೆ.ಇನ್ನೂ ಜಿಲ್ಲಾಡಳಿತದ ರಜೆಯ ನಿರ್ಧಾರಕ್ಕೆ ನರೇಂದ್ರ ಮೋದಿ ಕಾರ್ಯಕ್ರಮದ ಕಾರಣಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ನೀಡಿದ್ರಾ ಎಂಬ ಮಾತು ವ್ಯಕ್ತವಾಗಿದೆ