ಬೆಂಗಳೂರು –
ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ.ಡಾ.ರಿತೇಶ್ ಕುಮಾರ್ ಸಿಂಗ್ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಯಾಗಿ ವರ್ಗಾವಣೆ ಮಾಡಲಾಗಿದೆ.
ಇನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್.ಮಂಜುಶ್ರೀ ಅವರನ್ನು ಪೌರಾಡಳಿತ ನಿರ್ದೇಶಕಿ ಯಾಗಿ ವರ್ಗಾವಣೆ ಮಾಡಲಾಗಿದೆ.ಆರ್.ವೆಂಕಟೇಶ್ ಕುಮಾರ್ ಅವರನ್ನು ಹೆಚ್ಚುವರಿ ಮುಖ್ಯ ಚುನಾವಣಾಧಿ ಕಾರಿ(ವೆಚ್ಚ)ಡಾ.ಆರ್.ರಾಗಪ್ರಿಯಾ ರಾಷ್ಟ್ರೀಯ ಜೀವ ನೋಪಾಯ ಮಿಷನ್ ನಿರ್ದೇಶಕ,ಜಿ.ಆರ್.ಜೆ. ದಿವ್ಯಾ ಪ್ರಭು ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಲಿ. ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.