ಬೆಂಗಳೂರು –
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು
*ಮಾನ್ಯ ಜಿಲ್ಲಾ ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿಗಳು, *ಮಾನ್ಯ ತಾಲ್ಲೂಕು ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸಮಸ್ತ ಪದಾಧಿಕಾರಿಗಳು/ ಪ್ರತಿನಿಧಿಗಳು/ನಿರ್ದೇಶಕರ ಗಮನಕ್ಕೆ*
ಶಿಕ್ಷಕರ ದಿನಾಚರಣೆಯ ನಿಮಿತ್ಯವಾಗಿ ಶಿಕ್ಷಕರ ಬೇಕು-ಬೇಡಿಕೆಗಳ ಈಡೇರಿಕೆಗಾಗಿ ಹಕ್ಕೋತ್ತಾಯ ಪತ್ರ ಸಲ್ಲಿಕೆ.
ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಅಖಿಲ ಭಾರತ ಶಿಕ್ಷಕರ ಫೆಡರೇಷನ್ ನವದೆಹಲಿ (AIPTF) ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಇವರ ನೇತೃತ್ವದಲ್ಲಿ
👉ಈ ಹಿಂದೆ ತಮ್ಮೆಲ್ಲರಿಗೂ ತಿಳಿಸಿದಂತೆ ಸಹಿ ಸಂಗ್ರಹಣಾ ಪತ್ರಗಳನ್ನು ಸೆಪ್ಟಂಬರ್ 5 ರಂದು ಮಾನ್ಯ ಜಿಲ್ಲಾಧಿಕಾರಿ ಗಳ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ,ಮಾನ್ಯ ಪ್ರಧಾನ ಮಂತ್ರಿಗಳಿಗೆ ಹಾಗೂ ಮಾನ್ಯ ಮುಖ್ಯ ಮಂತ್ರಿ ಗಳಿಗೆ ಮನವಿ ಸಲ್ಲಿಸುವುದು.
👉 ಶಿಕ್ಷಕರ ದಿನಾಚರಣೆಯ ಕೊಡುಗೆಯಾಗಿ ವರ್ಗಾವಣೆ ಕಾಯ್ದೆಯಲ್ಲಿ ತಿದ್ದುಪಡಿಯನ್ನು ಮಾಡಿಯೇ ವರ್ಗಾವಣಾ ಪ್ರಕ್ರಿಯೆಗಳನ್ನು ಪ್ರಾರಂಭಿಸಬೇಕು ಹಾಗೂ ಒಂದು ವೃಂದ ದಲ್ಲಿ 10 ವರ್ಷಗಳ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಹಾಗೂ ಸಂಚಿತವಾಗಿ 15 ವರ್ಷಗಳ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸೇವಾವಧಿಯಲ್ಲಿ ಅವರು ಬಯಸಿದ ಜಿಲ್ಲೆಗಳಿಗೆ ಒಂದು ಬಾರಿ ಹಂತ ಹಂತವಾಗಿ ವರ್ಗಾವಣೆ ನೀಡುವಂತೆ (One time settlement transfer process) ತಾಲ್ಲೂಕು ಹಂತದಲ್ಲಿ ಶಿಕ್ಷಕರ ದಿನಾಚರಣೆಯಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಾಸಕರು/ವಿಧಾನಪರಿಷತ್ ಸದಸ್ಯರ ಮೂಲಕ ಮಾನ್ಯ ಶಿಕ್ಷಣ ಸಚಿವರಿಗೆ ಹಾಗೂ ಮಾನ್ಯ ಮುಖ್ಯ ಮಂತ್ರಿಗಳಿಗೆ ಸಲ್ಲಿಸುವುದು.
👉ಹೊಸದಾಗಿ 6 ರಿಂದ 8ಕ್ಕೆ ನೇಮಕಾತಿ ಮಾಡಿಕೊಳ್ಳು ತ್ತಿರುವ 15000 ಶಿಕ್ಷಕರ ಪ್ರಕ್ರೀಯೆ ಪೂರ್ಣಗೊಳ್ಳುವ ಮೊದಲು ಸೇವಾ ನಿರತ ಪದವೀಧರ ಶಿಕ್ಷಕರನ್ನು (40%) ಪರೀಕ್ಷೆ ರಹಿತವಾಗಿ 6 ರಿಂದ 8ಕ್ಕೆ ನಿಯುಕ್ತಿಗೊಳಿಸುವ ಪ್ರಕ್ರೀಯೆ ಪೂರ್ಣಗೊಳಿಸುವಂತೆ ಮನವಿಯನ್ನು ತಾಲ್ಲೂಕು ಹಂತದಲ್ಲಿ ಶಿಕ್ಷಕರ ದಿನಾಚರಣೆಯಂದು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಮಾನ್ಯ ಶಾಸಕರು/ವಿಧಾನಪರಿಷತ್ ಸದಸ್ಯರ ಮೂಲಕ ಮಾನ್ಯ ಶಿಕ್ಷಣ ಸಚಿವರಿಗೆ ಹಾಗೂ ಮಾನ್ಯ ಮುಖ್ಯ ಮಂತ್ರಿಗಳಿಗೆ ಸಲ್ಲಿಸು ವುದು.ಜಿಲ್ಲಾ ಹಂತದಲ್ಲಿ ಮಾನ್ಯ ಉಪರ್ದೇಶಕರ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಮಾನ್ಯ ಶಿಕ್ಷಣ ಸಚಿವರಿಗೆ ಹಾಗೂ ಮಾನ್ಯ ಮುಖ್ಯಮಂತ್ರಿಗಳಿಗೆ ಸಲ್ಲಿಸುವುದು.