ಬೆಂಗಳೂರು –
ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ವಾಗಿದೆ ಹೌದು ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಕುಸಿದು ಬಿದ್ದಿದ್ದಾರೆ.ಊಟ ಮಾಡಿದ ನಂತರ ರೂಮ್ ನಲ್ಲಿ ಹೋಗುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ
ಎದೆ ನೋವು ಕಾಣಿಸಿಕೊಂಡ ಕೂಡಲೇ ಅವರನ್ನು ಆಪ್ತ ಸಹಾಯಕ ಕಿರಣ್ ಕೂಡಲೇ ಎಮ್ ಎಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು ಸಧ್ಯ ಅವರಿಗೆ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಯನ್ನು ನೀಡಲಾಗುತ್ತಿದ್ದು ಇಂದು ಇಡೀ ದಿನ ಬಿಡುವಿಲ್ಲದೆ ಸಭೆಯನ್ನು ಮಾಡಿ ಎಲ್ಲಾ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಬಂದಿದ್ದರು