ಬೀದರ್ –
ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಸಂಖ್ಯೆ ಕೊರತೆ ಹಾಗೂ ಮಾದರಿ ಶಾಲೆ ರೂಪಿಸುವ ನೆಪದಲ್ಲಿ ರಾಜ್ಯದಲ್ಲಿ 13,800 ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಹೊರಟಿ ರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್‌ನ ಜಿಲ್ಲಾ ಘಟಕ ಖಂಡಿಸಿದೆ.ಕೋವಿಡ್ ನಂತರ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ.ಪ್ರಸ್ತುತ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ರಾಜ್ಯ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವ ಬದಲು ಶಾಲೆಗಳನ್ನು ಮುಚ್ಚಿದರೆ ತಳ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿರಾಗುವ ಅಪಾಯ ಇದೆ ಎಂದು ಹೇಳಿದ್ದಾರೆ
ಕೌನ್ಸೆಲಿಂಗ್ ಮೂಲಕ ವಿದ್ಯಾರ್ಥಿಗಳಿಗೆ ಪ್ರವೇಶ ಕೊಡುತ್ತಿ ರುವ ಕಾರಣ ಬಡ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಪ್ರವೇಶ ದೊರಕುತ್ತಿಲ್ಲ.ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ ಸಿಗುತ್ತಿಲ್ಲ.ಹೀಗಾಗಿ ಹಾಸ್ಟೆಲ್ ವಿದ್ಯಾರ್ಥಿಗಳ ತಿಂಗಳ ಆಹಾರ ಭತ್ಯೆಯನ್ನು ಕೇರಳ ಮಾದರಿಯಲ್ಲಿ ಕನಿಷ್ಠ ₹ 3,500 ಹೆಚ್ಚಿಸಬೇಕು ಎಂದು ಒತ್ತಾಯಿಸಿದೆ. ವಿದ್ಯಾರ್ಥಿ ಗಳಿಗೆ ಎರಡು ವರ್ಷಗಳಿಂದ ಬೈಸಿಕಲ್,ಸಮವಸ್ತ್ರ, ವಿದ್ಯಾರ್ಥಿ ವೇತನ,ವಿದ್ಯಾಸಿರಿ,ಪಠ್ಯಪುಸ್ತಕ,ಫೆಲೋಶಿಪ್ ಮುಂತಾದ ಶೈಕ್ಷಣಿಕ ಪ್ರೋತ್ಸಾಹ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿಲ್ಲ.ಯೋಜನೆಗಳ ಅನುದಾನವನ್ನೂ ಹೆಚ್ಚಿಸಿಲ್ಲ ಎಂದು ಹೇಳಿದೆ.
ಬಿಜೆಪಿ ಸರ್ಕಾರ ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಕೋಮು ವಾದ ಮತ್ತು ಸಂಘ ಪರಿವಾರದ ವಿಚಾರಗಳನ್ನು ಬಿತ್ತರಿ ಸಲು ಪ್ರಯತ್ನಿಸುತ್ತಿದೆ.ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪಿಸಿರುವುದು ಖಂಡ ನೀಯ.ಸರ್ಕಾರ ತಕ್ಷಣ ಅದನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದೆ.ರಾಜ್ಯದ ಶಾಲೆಗಳಲ್ಲಿ 38 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಕಾಲೇಜುಗಳಲ್ಲಿ ಶೇಕಡ 56 ಉಪನ್ಯಾಸಕರ ಹುದ್ದೆಗಳು ಹಾಗೂ ವಿಶ್ವವಿದ್ಯಾಲಯ ಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಾಗಿವೆ.ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ದೂರಿದೆ.
ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಶಿಕ್ಷಣ ಇಲಾಖೆಯಲ್ಲಿ ಪ್ರತಿಯೊಂದು ಕೆಲಸಕ್ಕೂ ಲಂಚ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಬಿ.ಸಿ. ನಾಗೇಶ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು.ಶಿಕ್ಷಣ ಇಲಾಖೆ ಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದೆ.ಹೊಸ ರಾಷ್ಟ್ರೀಯ ನೀತಿ ಎನ್.ಇ.ಪಿ. ಯನ್ನು ರಾಜ್ಯದಲ್ಲಿ ಜಾರಿಯ ಹೆಸರಿನಲ್ಲಿ ಪದವಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನಡೆಸಿ, ಬಡ ವಿದ್ಯಾರ್ಥಿ ಗಳನ್ನು ಶಿಕ್ಷಣದಿಂದ ಹೊರ ಹಾಕುವ ಹುನ್ನಾರ ನಡೆಸಿದೆ. ಶಿಕ್ಷಣದ ವ್ಯಾಪಾರಿಕರಣಕ್ಕೆ ದಾರಿ ಮಾಡುತ್ತಿದೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿಪತ್ರ ವನ್ನು ಎಸ್.ಎಫ್.ಐ. ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ ಅವರು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರಿಗೆ ಸಲ್ಲಿಸಿದರು.ಎಸ್‌ಎಫ್‌ಐ ಉಪಾಧ್ಯಕ್ಷ ಅಮರ ಗಾದಗಿ, ಕಾರ್ಯದರ್ಶಿ ರೋಶನ್ ಮಲ್ಕಾಪುರೆ ಇದ್ದರು