ಬೆಂಗಳೂರು –
ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಹೌದು ಮಹಿಳೆಯನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಮನೆಯಲ್ಲಿದ್ದ ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿರುವ ಘಟನೆ ವಿದ್ಯಾರಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಬಾಭ ವಾನಿ ದೇವಸ್ಥಾನದ ಬಳಿಯ ಪ್ರಸನ್ನ ಕುಮಾರಿ(60) ಕೊಲೆ ಯಾದ ಶಿಕ್ಷಕಿಯಾಗಿದ್ದಾರೆ.
ವಿಜಯವಾಡ ಮೂಲದ ಪ್ರಸನ್ನ ಕುಮಾರಿ ಚಿಂತಾಮ ಣಿಯ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಒಬ್ಬಂಟಿ ಯಾಗಿ ಜೀವನವನ್ನು ಸಾಗಿಸುತ್ತಿದ್ದರು ಪ್ರಸನ್ನ ಕುಮಾರಿಯ ಮನೆಗೆ ನಿನ್ನೆ ರಾತ್ರಿ ಬಂದಿದ್ದ ದುಷ್ಕರ್ಮಿಗಳು ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಗೈದು ಮನೆಯಲ್ಲಿದ್ದ ಚಿನ್ನಾಭರಣ ದೊಂದಿಗೆ ಪರಾರಿಯಾಗಿದ್ದಾರೆ.
ನಿನ್ನೆ ತಡರಾತ್ರಿ ಕೊಲೆ ನಡೆದಿರುವ ಬಗ್ಗೆ ಶಂಕಿಸಲಾಗಿದ್ದು ಸದ್ಯ ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.