ರಾಯಚೂರು –
ಶಾಲೆಯಲ್ಲಿ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಾನೆ ಎಂದು ಶಿಕ್ಷಕನೋರ್ವ 8 ವರ್ಷದ ಬಾಲಕನ ಮೇಲೆ ಬಿಸಿ ನೀರು ಸುರಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿ ನಲ್ಲಿ ನಡೆದಿದೆ.ಮಸ್ಕಿಯ ಸಂತೆಕೆಲ್ಲೂರು ಗ್ರಾಮದಲ್ಲಿರುವ ಶಾಲೆಯ 2ನೇ ತರಗತಿಯ ವಿದ್ಯಾರ್ಥಿ ಅಖಿತ್ (8) ದೇಹದ ಶೇ.40ರಷ್ಟು ಭಾಗ ಬೆಂದು ಗಂಭೀರ ಗಾಯಗಳಾ ಗಿದ್ದು ಮಗುವನ್ನು ಲಿಂಗಸುಗೂರು ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಸೆಪ್ಟಂಬರ್ 2ರಂದು ಘಟನೆ ನಡೆದಿದ್ದು ತಡವಾಗಿ ಈ ಒಂದು ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಧ್ಯ ಪೊಲೀಸರು ದೂರು ದಾಖಲು ಮಾಡಿ ಕೊಂಡು ಮುಂದಿನ ಕೈಗೊಂಡಿದ್ದಾರೆ.
























