ಬೆಂಗಳೂರು –
ರಾಜ್ಯದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ರಾಜ್ಯ ಸರ್ಕಾರ ಮತ್ತೆ 2500 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.
ಪ್ರೌಢಶಾಲೆಗಳಿಗೆ 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳ ಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.2,200 ಸಹ ಶಿಕ್ಷಕರು,200 ದೈಹಿಕ ಶಿಕ್ಷಣ ಶಿಕ್ಷಕರು,100 ವಿಶೇಷ ಶಿಕ್ಷಕರು ಸೇರಿ ಒಟ್ಟು 2500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಶೀಘ್ರವೇ ಅಧಿಸೂಚನೆ ಹೊರಡಿಸಲಾಗು ವುದು ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.