This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಸಾಂಖ್ಯಿಕ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಈ ಕೂಡಲೇ ಬಿಡುಗಡೆ ಮಾಡಿ ಹೊರಬಿತ್ತು ಇಲಾಖೆಯ ಆಯುಕ್ತರಿಂದ ಅಧಿಕೃತ ಆದೇಶ…..

WhatsApp Group Join Now
Telegram Group Join Now

ಬೆಂಗಳೂರು –

ಡಯಟ್ ,ಸಿ.ಟಿ.ಇ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾಗಿ ಕಾರ್ಯ ನಿರ್ವಹಿ ಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರನ್ನು ಕರ್ತವ್ಯ ದಿಂದ ಬಿಡುಗಡೆಗೊಳಿಸುವಂತೆ ಸೂಚಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ ವಿಶಾಲ್ ಈ ಕುರಿತು ಆದೇಶ ಹೊರಡಿಸಿದ್ದು ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಯು ಯೋಜನೆ,ಕಾರ್ಯಕ್ರಮ ಸಂಯೋ ಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಂಬಂಧಿಸಿದ ಹುದ್ದೆ ಗಳಾಗಿದ್ದು ಈ ಹುದ್ದೆಗಳಲ್ಲಿ ತಜ್ಞ ಸಿಬ್ಬಂದಿಗಳು ಕಾರ್ಯ ನಿರ್ವಹಿಸಬೇಕಾಗುತ್ತದೆ.

ಈ ಹುದ್ದೆಗಳಲ್ಲಿ ಬೋಧಕ ವೃಂದದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರು ಕಾರ್ಯನಿರ್ವಹಿಸುವುದು ಸಮಂಜಸವಲ್ಲ ಆದ್ದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರ ಸೇವೆ ಯನ್ನು ಹಿಂಪಡೆದು ಸದರಿ ಶಿಕ್ಷಕರು 10 ವರ್ಷ ‘ಸಿ’ ವಲಯದಲ್ಲಿ ಸೇವೆ ಸಲ್ಲಿಸದಿದ್ದಲ್ಲಿ ಕಡ್ಡಾಯವಾಗಿ ಸಿ ವಲಯಕ್ಕೆ ನಿಯುಕ್ತಿಗೊಳಿಸುವಂತೆ ಸೂಚನೆ ನೀಡಿದ್ದಾರೆ.


Google News

 

 

WhatsApp Group Join Now
Telegram Group Join Now
Suddi Sante Desk