ಬಾಗೇಪಲ್ಲಿ –
ಬಾಗೇಪಲ್ಲಿ ತಾಲ್ಲೂಕಿನ ಕೊತ್ತಪಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಕರಾದ ಹೆಚ್.ವಿ.ವೆಂಕಟೇಶ್ ಅವರನ್ನು ಭಾರತ್ ಸ್ಕೌಟ್ಸ್ ಗೈಡ್ , ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಣಾ ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊತ್ತಪಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೆಂಕಟೇಶ್ ಅವರಿಗೆ ಸನ್ಮಾನಿಸಿ ಬಿಳ್ಕೋಡಲಾಯಿತು.
1993ರಲ್ಲಿ ನೇಮಕಗೊಂಡು ಚೇಳೂರು ತಾಲ್ಲೂಕು ಪುಲಗಲ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕ ವೃತ್ತಿಯನ್ನು ಪ್ರಾರಂಭಿಸಿ,ಬಾಗೇಪಲ್ಲಿ ಕಸಬಾ ಹೋಬಳಿ ಕೊಂಡರೆಡ್ಡಿಪಲ್ಲಿ ಯಲ್ಲಿ ಸುಮಾರು 13 ವರ್ಷಗಳ ಕಾಲ ಸೇವೆ ಸಲ್ಲಿಸಿ ತದನಂತರ ಕೊತ್ತಪಲ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದೂವರೆ ವರ್ಷ ಸೇವೆ ಸಲ್ಲಿಸಿ ದಿನಾಂಕ 31/10/2020 ರಂದು ನಿವೃತ್ತಿ ಹೊಂದಿ 27 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.
ಬಾಗೇಪಲ್ಲಿ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಶಿಕ್ಷಕರಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು ಈ ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಿಕ್ಕಬಳ್ಳಾಪುರ ಜಿಲ್ಲೆಯ ಸಂಚಾಲಕ ಮನೋಹರ್ ದೈಹಿಕ ಶಿಕ್ಷಕರಾದ ನಟರಾಜ್, ಸರ್ಕಾರಿ ಬಾಲಕಿಯರ ಶಾಲೆ ಮುಖ್ಯ ಶಿಕ್ಷಕ ಫಕ್ರುದೀನ್ ಸಾಬ್, ಪ್ರಧಾನ ಕಾರ್ಯದರ್ಶಿ ಶಿವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.