KSRTC ಬಸ್ ಪಲ್ಟಿ – ಇಬ್ಬರು ಸಾವು

Suddi Sante Desk

ಚಿತ್ರದುರ್ಗ –

KSRTC ಬಸ್ ವೊಂದು ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವಿಗೀಡಾರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಶಿವಮೂರ್ತಿ ಬಡಾವಣೆಯ ಬಳಿ ಈ ಒಂದು ಘಟನೆ ನಡೆದಿದೆ.

ಶಹಪುರ ದಿಂದ- ಬೆಂಗಳೂರು ತೆರಳುತ್ತಿದ್ದ KSRTC ಬಸ್ ಪಲ್ಟಿಯಾಗಿದೆ.ಬಸ್ಸಿನಲ್ಲಿ 50 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದ.ಯಾದಗಿರಿ ಮೂಲದ ಬಸವರಾಜ್ (32) ಐಶ್ವರ್ಯ (12) ಮೃತ ಪ್ರಯಾಣಿಕರಾಗಿದ್ದಾರೆ. ಇನ್ನೂ ಘಟನೆಯಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ.

ಇನ್ನೂ ವಿಷಯ ತಿಳಿದ ಹಿರಿಯೂರು ನಗರ ಠಾಣೆ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆ ಮಾಡ್ತಾ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.