ಧಾರವಾಡ – ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ ಮಾಡಿದ ಆರೋಪದ ಮೇಲೆ ಧಾರವಾಡದಲ್ಲಿ ನಾಲ್ಕು ಜನ ಸರ್ಕಾರಿ ನೌಕರರನ್ನು ಅಮಾನತು ಮಾಡಲಾಗಿದೆ.ಹೌದು ಧಾರವಾಡದಲ್ಲಿ ಈ ಒಂದು ಪ್ರಕರಣ ನಡೆದಿದೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈ ಹಿಂದೆ ಬಿದ್ದ ಮನೆಗಳಿಗೆ ಪರಿಹಾರ ವಿತರಣೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಗೋಲ್ ಮಾಲ್ ನಡೆಯುತ್ತಿತ್ತು. ಶಾಸಕರಾದ ಅಮೃತ ದೇಸಾಯಿ ಅವರ ಕ್ಷೇತ್ರದಲ್ಲಿನ ನೆರೆ ಪರಿಹಾರದಲ್ಲಿ ಬಿದ್ದ ಮನೆಗಳಿಗೆ ಪರಿಹಾರ ಧನ ವಿತರಣೆ ಮಾಡುವಲ್ಲಿ ಸಾರ್ವಜನಿಕರಿಂದ ಅಧಿಕಾರಿಗಳು ಹಣವನ್ನು ತಗೆದುಕೊಳ್ಳುವ ಕುರಿತಂತೆ ದೂರುಗಳು ಕೇಳಿ ಬಂದಿದ್ದವು.ಸಾಕಷ್ಟು ಹಣ ತಗೆದುಕೊಂಡು ಪರಿಹಾರ ನೀಡುತ್ತಿದ್ದಾರೆಂದು ಸಾರ್ವಜನಿಕರ ಅಸಮಾಧಾನದಿಂದ. ಇದನ್ನು ಗಂಭೀರವಾಗಿ ತಗೆದುಕೊಂಡು ಶಾಸಕರಾದ ಅಮೃತ ದೇಸಾಯಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡಿದ್ದರು. ಅಲ್ಲದೇ ಶಿಸ್ತುಕ್ರಮವನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದರು.
ತಪ್ಪು ಮಾಡಿರುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಪತ್ರವೊಂದನ್ನು ಬರೆದಿದ್ದರು. ಇದನ್ನು ಗಂಭೀರವಾಗಿ ತಗೆದುಕೊಂಡಿರುವ ಜಿಲ್ಲಾಧಿಕಾರಿಗಳು ಗರಗ ಕಂದಾಯ ನೀರಿಕ್ಷಕ ಎನ್ ಎಸ್ ಪಟ್ಟೇದ , ಮುಳಮುತ್ತಲ ಗ್ರಾಮ ಲೆಕ್ಕಾಧಿಕಾರಿ ರಾಕೇಶ ಪಾಟೀಲ್, PDO ವಾಲಿಕಾರ್ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಹಾಗೇ ಈ ಒಂದು ಕಮೀಟಿಯಲ್ಲಿದ್ದ ಇನ್ನೊರ್ವ ಬೇರೆ ಇಲಾಖೆಯ ಅಧಿಕಾರಿಯೊಬ್ಬರು ಮಾಡಿರುವ ತಪ್ಪಿನ ಕುರಿತಂತೆ ಜಿಲ್ಲಾಧಿಕಾರಿಗಳು ಆ ಇಲಾಖೆಗೆ ಪತ್ರವೊಂದನ್ನು ಬರೆದಿದ್ದಾರೆ.
ಒಟ್ಟಾರೆ ಬಿದ್ದ ಮನೆಗಳಿಗೆ ಪರಿಹಾರ ನೀಡುವ ನೆಪದಲ್ಲಿ ಹಣ ತೆಗೆದುಕೊಂಡು ಸಾರ್ವಜನಿಕರ ಆಕ್ರೋಶಕ್ಕೇ ಗುರಿಯಾಗಿದ್ದ ಕಂದಾಯ ಇಲಾಖೆಯ ಮೂವರು ಅಧಿಕಾರಿಗಳ ತಲೆದಂಡವಾಗಿದ್ದು ಮುಂದೆ ತನಿಖೆಯ ನಂತರ ಏನೇಲ್ಲಾ ಕ್ರಮಗಳಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಾರೆ ಜನರ ನೋವಿಗೆ ಸ್ಪಂದಿಸಿದ ಶಾಸಕ ಅಮೃತ ದೇಸಾಯಿ ಯವರಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.