ಸಿಬಿಟಿಯಲ್ಲಿ ಕೊರೊನಾ ವೈರಾಣು ವೇಷಧಾರಿ – ಮಾಸ್ಕ್ ಧರಿಸಲು ಜಾಗೃತಿ

Suddi Sante Desk

ಧಾರವಾಡ – ಕೊರೊನಾ ವೈರಾಣು ನಿಯಂತ್ರಣಕ್ಕೆ ಮಾಸ್ಕ್ ಧರಿಸುವಿಕೆ , ದೈಹಿಕ ಅಂತರ ಪಾಲನೆ ಅತ್ಯಗತ್ಯ. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ನಿರಂತರ ಪ್ರಯತ್ನ ಮಾಡುತ್ತಿವೆ. ಜಾಗೃತಿ ಕಾರ್ಯ ಇನ್ನಷ್ಟು ಪರಿಣಾಮಕಾರಿಯಾಗಿಸಲು ಕೊರೊನಾ ವೈರಾಣು ವೇಷಧಾರಿಯೊಬ್ಬರು ಧಾರವಾಡ ಪ್ರದೇಶಗಳಲ್ಲಿ ಕಾಣಿಸಿಕೊಂಡರು.


ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಅವರ ಪರಿಕಲ್ಪನೆಯಲ್ಲಿ ಈ ಕಾರ್ಯ ಕೈಗೊಂಡಿದ್ದು, ಪ್ರತಿನಿತ್ಯ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೊರೊನಾ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ವೇಳೆಯಲ್ಲಿ ಕಲಾವಿದರೊಬ್ಬರನ್ನು ಬಳಸಿಕೊಂಡು

ಅವರಿಗೆ ಕೊರೊನಾ ವೈರಾಣು ವೇಷ ಹಾಕಿಸಿ, ಜನ ನಿಬಿಡ ಸ್ಥಳಗಳಲ್ಲಿ ಹಠಾತ್ ಕಳಿಸಿ, ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆಗೆ ಕರೆತರುವ ಕಾರ್ಯಾಚರಣೆ ಇಂದಿನಿಂದ ಜಿಲ್ಲೆಯಲ್ಲಿ ಈ ಕಾರ್ಯ ಪ್ರಾರಂಭವಾಗಿದೆ.


ನಾದಝೇಂಕಾರ ಸಂಸ್ಥೆಯ ಯಮನಪ್ಪ ಜಾಲಗಾರ ಅವರು ತಮ್ಮ ತಂಡದ ಬಸವರಾಜ ಗುಡ್ಡಪ್ಪನವರ ಅವರಿಗೆ ಕೊರೊನಾ ವೇಷ ತೊಡಿಸಿ , ಜನರ ಮಧ್ಯೆ ಕಳಿಸುತ್ತಿದ್ದಾರೆ. ಪ್ರಸಾದನ ಕಲಾವಿದ ಸಂತೋಷ ಮಹಾಲೆ ಈ ವೇಷ ಭೂಷಣ ಸಿದ್ಧಪಡಿಸಿದ್ದಾರೆ.


ಈ ಒಂದು ವಿಶೇಷವಾದ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಒಟ್ಟಾರೆ ಕರೋನ ಮಹಾಮಾರಿಯನ್ನು ನಿಯಂತ್ರಿಸುವ ಸಲುವಾಗಿ ಹೀಗೆ ವಿಭಿನ್ನವಾಗಿ ಕಾರ್ಯಕ್ರಮ ಹಮ್ಮಿಕೊಂಡಿರುವ ಜಿಲ್ಲಾಧಿಕಾರಿ ಕಾರ್ಯ ಇವಕ್ಕೆ ಸಾಥ್ ನೀಡಿದ ಆರೋಗ್ಯ ಇಲಾಖೆಯ ಪ್ರಯತ್ನ ಮೆಚ್ಚುವಂತದ್ದು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.