ಉಚಿತ ಕಂಪ್ಯೂಟರ್ ತರಬೇತಿ – ಈಗಲೇ ಅರ್ಜಿ ಹಾಕಿ

Suddi Sante Desk

ಧಾರವಾಡ –

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಪ್ಯೂಟರ್ ತರಭೇತಿ ನೀಡಲಾಗುತ್ತಿದೆ. ಧಾರವಾಡದ ಸ್ಯಾನ ಐಟಿ ಸಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವತಿಯಿಂದ ಈ ಒಂದು ಕಂಪ್ಯೂಟರ್ ತರಬೇತಿಯನ್ನು ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಯೋಜನೆ ಅಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಹಾಗೂ ನಿರುದ್ಯೋಗ ಯವಕ ಯವತಿಯರಿಗೆ ತರಬೇತಿ ನೀಡಲಾಗುತ್ತಿದೆ.

3 ತಿಂಗಳ ಕಾಲ ಉಚಿತವಾಗಿ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ. ಪ್ರಮುಖವಾಗಿ ಈ ಒಂದು ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಆಸಕ್ತರು ತಮ್ಮ ಎಸ್ ಎಸ್ ಎಲ್ಎಸಿ ಅಂಕಪಟ್ಟಿ ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರ ಜಾತಿ ಪ್ರಮಾಣಪತ್ರ ಹೀಗೆ ಎಲ್ಲಾ ದಾಖಲೆಗಳೊಂದಿಗೆ ಡಿಸೆಂಬರ್ 15 ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಸಂಸ್ಥೆ ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ 9342016573 ಸ್ಯಾನ್ ಐಟಿ ಸಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಲಕ್ಮೀ ಟಾಕೀಸ್ ಹತ್ತಿರ ಧಾರವಾಡ. ಇವರನ್ನು ಸಂಪರ್ಕ ಮಾಡಿ.ಇನ್ನೂ ಸರ್ಕಾರದ ಈ ಒಂದು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥ ಮಂಜುನಾಥ ಬೋವಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.