ಧಾರವಾಡ ,- ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ, ಧಾರವಾಡದ ಗಾಂಧಿ ನಗರ ಕ್ರಾಸ್ ಬಳಿ ನಡೆದಿದೆ. ಮೃತ ಬೈಕ್ ಸವಾರ ವಿನಾಯಕ ಬನಕಾರ (23) ಎಂದು ಗುರುತಿಸಲಾಗಿದೆ. ಇನ್ನೂ ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಕಾರು ತೆರಳುತ್ತಿದ್ದು, ಶೆಟ್ಟರ್ ಕಾಲನಿಗೆ ಬೈಕ್ ಸವಾರ ತೆರಳುತ್ತಿದ್ದ ಈ ವೇಳೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ ಸವಾರ ಸ್ಥಳದಲ್ಲೆ ಅಸುನೀಗಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಧಾರವಾಡ ಸಂಚಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


