ಮಂಗಳೂರಿನಲ್ಲಿ ಅಪಹರಣ – ಕೋಲಾರದಲ್ಲಿ ಬಂಧನ – ಸುಖಾಂತ್ಯ ಕಂಡ ಮಗು ಅಪಹರಣ ಪ್ರಕರಣ

Suddi Sante Desk

ಬೆಳ್ತಂಗಡಿ  –

ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಪೊಲೀಸರು ಮಗುವನ್ನು ಸುರಕ್ಷಿತ ವಾಗಿ ಕೋಲಾರ ಪೊಲೀಸರು ರಕ್ಷಿಸಿದ್ದಾರೆ. ಕೋಲಾರದಲ್ಲಿ ಮಗುವನ್ನು ಪತ್ತೆ ಹಚ್ಚಿ 6 ಜನ ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ‌. ಅಪಹರಣವಾದ 48 ಗಂಟೆ ಗಳಲ್ಲಿ ಪ್ರಕರಣವನ್ನು ಭೇದಿಸಿದ್ದಾರೆ. ಉಜಿರೆಯ ಬಿಜೋಯ್ ಅವರ ಮಗ ಅನುಭವ್ (8) ಮನೆಯಂಗಳದಲ್ಲಿ ಆಡುತ್ತಿದ್ದಾಗಲೇ ಎರಡು ದಿನಗಳ ಹಿಂದೆ ಅಪಹರಣಕಾರರು ಅಪಹರಿಸಿದ್ದರು.

ಕೋಲಾರದ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ ಪತ್ತೆ ಹಚ್ಚಿದರು. ಕೂಡಲೇ ಅಪಹರಣಕಾರರನ್ನು ಕೋಲಾರ ಪೊಲೀಸ್ ಠಾಣೆಗೆ ಕರೆತರಲಾಯಿತು. ಬೆಳ್ತಂಗಡಿ ನ್ಯಾಯಾಲಯಕ್ಕೆ ಆರೋಪಿಗಳನ್ನು ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಉಪನಿರೀಕ್ಷಕ ಬಂದಕುಮಾರ್, ಧರ್ಮಸ್ಥಳ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ನೇತೃತ್ವದ ವಿಶೇಷ ತಂಡ ಹಾಜರು ಪಡಿಸಿತು.ಪ್ರಕರಣ ಘಟಿಸಿದ ಕೂಡಲೇ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ನೇತೃತ್ವದಲ್ಲಿ ನಾಲ್ಕು ತಂಡಗಳ ರಚಿಸಿ ಪ್ರಕರಣವನ್ನು ಬೇಧಿಸಲು ಕಾರ್ಯಶೀಲರಾಗಿದ್ದರು.ಕೊನೆಗೂ ಮಂಗಳೂರಿನ ಕಿಡ್ಯಾಪರ್ಸ್ ಕೋಲಾರದಲ್ಲಿ ಅರೆಸ್ಟ್ ಆಗಿದ್ದಾರೆ.ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೂರ್ನಹೊಸಳ್ಳಿ ಗ್ರಾಮದಲ್ಲಿ ಅರೆಸ್ಟ್ ಆಗಿದ್ದಾರೆ. ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯೊಂದರಲ್ಲಿ ಮಗುವನ್ನು ಇರಿಸಿದ್ದರು.ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಬಂಧಿಸಿದ ಮಂಗಳೂರು ಪೊಲೀಸ್ ವಿಶೇಷ ತಂಡ ಯಶಸ್ವಿಯಾಗಿ ಕಾರ್ಯಾಚರಣೆ ಮಾಡಿ ಮಗುವನ್ನು ರಕ್ಷಣೆ ಮಾಡಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.