ಮಂಗಳೂರು (ದಕ್ಷಿಣ ಕನ್ನಡ) –
ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಲ್ಲಿ ಸೆಪ್ಟೆಂಬರ್ 28ರಿಂದ ಅನ್ವಯಗೊಂಡಂತೆ ಅಕ್ಟೋಬರ್ 1ರವರೆಗೆ ಹೆಚ್ಚುವರಿ 4 ದಿನಗಳ ರಜೆಯನ್ನು ಘೋಷಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಈಗಾಗಲೇ ರಾಜ್ಯದ ಎಲ್ಲಾ ಶಾಲೆಗಳಿಗೆ ಶೈಕ್ಷಣಿಕ ಮಾರ್ಗಸೂಚಿಯಂತೆ ಅಕ್ಟೋಬರ್ 3ರಿಂದ ಅಕ್ಟೋಬರ್ 16ರವರೆಗೆ ರಜೆಯನ್ನು ನಿಗದಿಪಡಿಸಲಾಗಿದೆ. ಈ ಮಧ್ಯೆ ಸೆಪ್ಟೆಂಬರ್ 26ರಿಂದ ಆರಂಭಗೊಳ್ಳುವ ಮಂಗಳೂರು ದಸರಾ ಹಬ್ಬದ ಹಿನ್ನೆಲೆ ಸೆ.26ರಿಂದಲೇ ರಜೆ ನೀಡುವಂತೆ ಪೋಷಕರು ಜನಪ್ರತಿನಿಧಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.
ಇದಕ್ಕೆ ಶಿಕ್ಷಣ ಸಚಿವರು ಪೂರಕವಾಗಿ ಸ್ಪಂದಿಸಿದ್ದರೂ ಸಹ ಇದೀಗ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಇದರನ್ವಯ ಮಂಗಳೂರು ತಾಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 1ರವರೆಗೆ ಹೆಚ್ಚುವರಿ ರಜೆಗಳನ್ನು ಘೋಷಿಸಲಾಗಿದೆ ಅಕ್ಟೋಬರ್ 2ರ ರವಿವಾರ ಗಾಂಧಿ ಜಯಂತಿಕಾರ್ಯಕ್ರಮವನ್ನು ಆಯೋಜಿಸುವಂತೆ ಕಡ್ಡಾಯವಾಗಿ ಸೂಚಿಸಿದೆ.ವಿದ್ಯಾರ್ಥಿಗಳಿಗೆ ನೀಡಲಾದ ಈ 4 ಹೆಚ್ಚುವರಿ ರಜೆಗಳನ್ನು ನವೆಂಬರ್ ತಿಂಗಳಿನ 4 ಶನಿವಾರ ಪೂರ್ಣ ದಿನದ ತರಗತಿ ಮತ್ತು 2 ರವಿವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ರಜೆಯನ್ನು ಸರಿದೂಗಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.