ಬೆಂಗಳೂರು –
ಬೆಂಗಳೂರು ಸೇರಿದಂತೆ ರಾಜ್ಯದ ಮೂರು ವಿಶ್ವವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಮೂವರು ಕೆಎಎಸ್ ಅಧಿಕಾರಿ ಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ,ಗುಲ್ಬರ್ಗ ವಿಶ್ವ ವಿದ್ಯಾಲಯಗಳಿಗೆ ಕುಲಸಚಿವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೆ. ಶಾಂತಲಾ, ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮಹೇಶ್ ಬಾಬು,ಗುಲ್ಬರ್ಗ ವಿವಿಗೆ ಡಾ. ಬಿ.ಶರಣಪ್ಪ ಅವರನ್ನು ಕುಲಸಚಿವರಾಗಿ ನೇಮಿಸಿ ಆದೇಶ ಹೊರಡಿಸಿದೆ