ಬೆಂಗಳೂರು –
ಇತ್ತೀಚೆಗಷ್ಟೇ ಸೇವೆಯಿಂದ ಅಮಾನತಾಗಿದ್ದ ಕೆ.ಆರ್. ಪುರ ಠಾಣೆ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಅವರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದಾರೆ.ಠಾಣೆ ವ್ಯಾಪ್ತಿಯಲ್ಲಿದ್ದ ಟಾನಿಕ್ ಬಾರ್ ಆಯಂಡ್ ರೆಸ್ಟೋರೆಂಟ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು.ಸಿಸಿಬಿ ದಾಳಿ ಮಾಡಿ ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು.
ಅವಧಿ ಮೀತಿ ವಹಿವಾಟು ನಡೆಸುತ್ತಿದ್ದ ಬಾರ್ ಆಯಂಡ್ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ನಂದೀಶ್ ಅವರನ್ನು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಸೇವೆಯಿಂದ ಅಮಾನತು ಮಾಡಿದ್ದರು.
ಇಂದು ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ಕರೆದೊಯ್ದಿದ್ದರು ಆದರೆ ಅವರು ಹೃದಯಾಘಾ ತದಿಂದ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ