This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State Newsಬೆಂಗಳೂರು ನಗರ

ಪ್ರತಿ ದಿನ ಒಂದು ಗಂಟೆ ಹೆಚ್ಚು ಕೆಲಸ ಮಾಡಲು ಸರ್ಕಾರಿ ನೌಕರರಿಗೆ CM ಕರೆ ರಾಜ್ಯದ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ನಾವೆಲ್ಲರೂ ಸೇರಿ ನಾಡನ್ನು ಕಟ್ಟೋಣ ಎಂದರು ಮುಖ್ಯಮಂತ್ರಿ

WhatsApp Group Join Now
Telegram Group Join Now

ಬೆಂಗಳೂರು

ಪ್ರತಿ  ದಿನ ಒಂದು ತಾಸು ಹೆಚ್ಚಿಗೆ   ಕೆಲಸ ಮಾಡಿ  ಎಂದು ಮುಖ್ಯ ಮಂತ್ರಿ ಬಸವರಾಜಬೊಮ್ಮಾಯಿ ಅವರು ಸರ್ಕಾರಿ ನೌಕರರಿಗೆ ಕರೆ ನೀಡಿದರು. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ  ನಿಯೋ ಗವು ಇಂದು ಮುಖ್ಯ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು.

ಕೆಳಹಂತದವರೆಗೆ ಈ ಕೆಲಸ ಆಗಬೇಕು. ಮುಂದಿನ ಕೆಲಸಗಳನ್ನು ನನಗೆ ಬಿಡಿ.ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾ ಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ  ಕೆಲಸ ಮಾಡಿ. ಬಡವರಿಗೆ,ಜನಪರವಾದ ಕೆಲಸ ಮಾಡಿ ದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ.ನವ ಕರ್ನಾಟಕ ದಿಂದ ನವ ಭಾರತ ನಿರ್ಮಿಸೋಣ ಎಂದರು.ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿ ಕತೆಗೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್  ಡಾಲರ್ ಕೊಡುಗೆ ನೀಡಬೇಕು ಎಂದರು.

ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರು ವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದರು. ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭ ಕ್ಕೂ ಈಗಿನ  ಸಂದರ್ಭಕ್ಕೂ ವ್ಯತ್ಯಾಸ ವಿರುತ್ತದೆ. ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾ ದನೆಯಾದರೆ ಬದುಕಿಗೆ ಪ್ರೇರಣೆ.

ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಒತ್ತಾಸೆಯಾಗಿದ್ದರು.ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರೂ ಒತ್ತಾಯ ಮಾಡಿದ್ದರುಎಂದರು

ಅತ್ಯಂತ ಪ್ರಾಮಾಣಿಕ,ನಿಷ್ಠಾವಂತ ಅಧಿಕಾಯಾ ಗಿದ್ದ ಡಾ ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು.ಪ್ರಭಾವಕ್ಕೆ ಮಣಿಯದವರು.  ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ,ಶುದ್ಧ ಅಂತ: ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ ಎಂದರು.ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ ಇದನ್ನು ಸಕಾರಗೊಳಿಸಿ ಎಲ್ಲರಿಗೂ ಒಳ್ಳೆ ಯದು ಆಗಬೇಕು.ಚಿಂತೆ ಮಾಡಬೇಡಿ.ಮುಂದಿನ ಸರ್ಕಾರ ನಮ್ಮದೇ ಬರಲಿದ್ದು ಇದರ ಅನುಷ್ಠಾನ  ನಾವೇ ಮಾಡುತ್ತೇವೆ ಎಂದರು.

ಸರಕಾರಿ ನೌಕರರ ಸೇವೆಗೆ ಅಭಿನಂದನೆ
ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ,ಪೊಲೀಸ್,ಗ್ರಾಮೀಣಾಭಿವೃದ್ಧಿ, ಕಂದಾಯ ಇಲಾಖೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿವೆ.ಕಂದಾಯ,ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿವೆ.ನಾನು ಮುಖ್ಯ ಮಂತ್ರಿಯಾದ ಸಂದರ್ಭದಲ್ಲಿ ಐದು ಸಾವಿರ ಕೋಟಿ ಆದಾಯ ಸಂಗ್ರಹ ಕೊರತೆ ಇತ್ತು.ಇದನ್ನು ಭರ್ತಿ ಮಾಡು ವಂತೆ ಸೂಚಿಸಿದಾಗ ತೆರಿಗೆ ಇಲಾಖೆ ಅಧಿಕಾರಿ ಗಳು ಇದಕ್ಕೆ ಸ್ಪಂದಿಸಿ ಆ ಮೊತ್ತವನ್ನು ತುಂಬಿ ದ್ದಷ್ಟೇ ಅಲ್ಲದೆ ಆ ವರ್ಷದ ಗುರಿಗಿಂತಲೂ 13 ಸಾವಿರ ಕೋಟಿ ರೂ.ಗಳ ಹೆಚ್ಚಿನ ಆದಾಯ ಸಂಗ್ರಹ ಮಾಡಿದರು ಎಂದರು.

ಸರ್ಕಾರದ ಮುಖ್ಯಸ್ಥನಾಗಿ ಸರಕಾರಿ ನೌಕರರ ಸೇವೆಯನ್ನು ಗುರುತಿಸುವುದಾಗಿ ತಿಳಿಸಿ ಅಭಿ ನಂದಿಸಿದ ಮುಖ್ಯಮಂತ್ರಿಗಳು ಅದೇ ಸಂದರ್ಭ ದಲ್ಲಿ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕೆಂಬ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಡಿಎ ಘೋಷಿಸಿದ 24 ಗಂಟೆಯೊಳಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಮತ್ತೊಂದು ಡಿಎ ಕೇಂದ್ರ ಸರ್ಕಾರಕ್ಕೆ ಬೆಳಿಗ್ಗೆ ಘೋಷಣೆ ಮಾಡಿದರೆ ಸಂಜೆ ರಾಜ್ಯ ದಲ್ಲಿ ಆದೇಶ ಹೊರಡಿಸಲಾಯಿತು ಎಂದರು.

ಜನಸ್ಪಂದನೆಯ ಕೆಲಸವಾಗಬೇಕು
ಕಾರ್ಯಾಂಗ ಜನಸ್ಪಂದನೆಯ ಕೆಲಸ ಮಾಡಿದಾಗ ಸರ್ಕಾರಕ್ಕೆ , ವ್ಯವಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ ಜನಸಂಖ್ಯೆ ಹೆಚ್ಚಿದ್ದು ಎಲ್ಲರ ಅಶೋತ್ತರಗಳೂ ಹೆಚ್ಚಾಗಿವೆ.ಯುವಕರು,ವಿದ್ಯಾವಂತರ ನೌಕರರ ಜೀವನದ ಗುಣಮಟ್ಟವೂ ಉತ್ತಮಗೊಳ್ಳಬೇಕು. ಅವರು ಚೆನ್ನಾಗಿದ್ದರೆ ಸಂತೋಷದಿಂದಿದ್ದರೆ ಸರ್ಕಾರದ ಕೆಲಸಗಳು ಉತ್ತಮವಾಗಿ ಆಗುತ್ತದೆ.

ವ್ಯವಸ್ಥೆಯಲ್ಲಿ ವೇತನ,ಸೌಲತ್ತು,ಪಿಂಚಣಿಯನ್ನು ಕಾಲಕಾಲಕ್ಕೆ ಪರಿಷ್ಕರಣೆ ಮಾಡಬೇಕು.ಇದು ಮೊದಲಿನಿಂದಲೂ ಬಂದಿದೆ.ಒಂದು ವೇತನ ಆಯೋಗಕ್ಕೂ ಮತ್ತೊಂದು ವೇತನ ಆಯೋಗದ ನಡುವೆ 5 ವರ್ಷಗಳ ಅಂತರವಿರಬೇಕು. ಆದರೆ  ಬಹಳ ಸಾರಿ ಹಾಗಾಗುವುದಿಲ್ಲ. 6-7 ವರ್ಷ ತೆಗೆದುಕೊಂಡಿರುವ ಉದಾಹರಣೆ ಇದೆ.ನಮ್ಮ ಸರ್ಕಾರ ಕೋವಿಡ್ ಹಾಗೂ ಪ್ರವಾಹದ ಹಿನ್ನೆಲೆ ಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಸರ್ಕಾರಕ್ಕೆ ಸಹಾಯಕವಾಗಿ ನಿಂತು ಜನರ ಸೇವೆಯನ್ನು ಅತ್ಯುತ್ತಮವಾಗಿ ಮಾಡಿದೆ ಎಂದರು.


Google News

 

 

WhatsApp Group Join Now
Telegram Group Join Now
Suddi Sante Desk