ಬೆಂಗಳೂರು –
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಕಳೆದ ಆರು ತಿಂಗಳ ಹಿಂದೆ ಅಷ್ಟೇ ಬಡ್ತಿ ಹೊಂದಿದ್ದ ಪೊಲೀಸ್ ಅಧಿಕಾರಿ ಧನಂಜಯ ನಿಧನರಾಗಿರುವ ಇನ್ಸ್ಪೆಕ್ಟರ್ ಆಗಿದ್ದಾರೆ.ಕ್ಯಾನ್ಸರ್ ನಿಂದ ಬಳಲು ತ್ತಿದ್ದು ಇವರು ಪೊಲೀಸ್ ಅಧಿಕಾರಿ ಜೀವನ್ಮರಣ ಹೋರಾಟ ನಡೆಸಿದರೂ ಕೊನೆಗೆ ಸಾವಿಗೆ ಶರಣಾಗುವಂತಾಗಿದೆ.
2010ರ ಬ್ಯಾಚ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಯಲ್ಲಿ ಆಯ್ಕೆಯಾಗಿದ್ದ ಧನಂಜಯ್, ಆರು ತಿಂಗಳ ಹಿಂದಷ್ಟೇ ಇನ್ಸ್ಪೆಕ್ಟರ್ ಆಗಿ ಬಡ್ತಿ ಹೊಂದಿದ್ದರು.ಹಲಸೂರುಗೇಟ್, ಇಂದಿರಾನಗರ ಠಾಣೆಗಳಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕೆಲಸ ನಿರ್ವ ಹಿಸಿದ್ದ ಇವರು, ಪ್ರಸ್ತುತ ವಿಧಾನಸೌಧ ಭದ್ರತಾ ವಿಭಾಗದಲ್ಲಿ ಇನ್ಸ್ಪೆಕ್ಟರ್ ಆಗಿದ್ದರು. ಕ್ಯಾನ್ಸರ್ ಪೀಡಿತರಾಗಿದ್ದು ಕಳೆದ ಕೆಲ ತಿಂಗಳುಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಅದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದರು.ಇನ್ನೂ ಇವರ ನಿಧನಕ್ಕೆ ನಾಡಿನ ಮೂಲೆ ಮೂಲೆಗಳಿಂದ ಪೊಲೀಸ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿ ಭಾವಪೂರ್ಣ ನಮನ ವನ್ನು ಸಲ್ಲಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್…..