ಕೋಲಾರ –
ಮಾಂಡೌಸ್ ಚಂಡಮಾರುತ ಎಫೆಕ್ಟ್ ನಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಮಳೆ ಶೀತ ಗಾಳಿ ಬರುತ್ತಿ ರುವ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆಯನ್ನು ಡಿಡಿಪಿಐ ಘೋಷಣೆ ಮಾಡಿ ಆದೇಶವನ್ನು ಮಾಡಿದ್ದಾರೆ.
ಹೌದು ಮಾಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆ ಯಾಗುತ್ತಿದೆ.ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜು ಗಳಿಗೆ ಡಿ.12 ರ ಇಂದು ರಜೆ ಘೋಷಣೆ ಮಾಡಿ ಕೋಲಾರ ಡಿಡಿಪಿಐ ಕೃಷ್ಣ ಮೂರ್ತಿ ಆದೇಶ ಹೊರಡಿಸಿದ್ದಾರೆ.
ಚಂಡಮಾರುತದ ಎಫೆಕ್ಟ್ ನಿಂದಾಗಿ ನಿರಂತರ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಬೆಂಗಳೂರು ಸೇರಿದಂತೆ ರಾಜ್ಯ ದಲ್ಲಿ ಇಂದೂ ಭಾರೀ ಮಳೆಯಾಗಲಿದ್ದು 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನ್ನು ಸಧ್ಯ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಹೀಗಾಗಿ ಮುನ್ನೆಚ್ಚರಿಕೆ ಹಿನ್ನೆಲೆ ಯಲ್ಲಿ ಮಕ್ಕಳ ಸುರಕ್ಷತಾ ಕ್ರಮಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡುವಂತೆ ಪೋಷಕರು ಒತ್ತಾಯ ಮಾಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಕೋಲಾರ…..