ಕುಶಾಲನಗರ –
ಕರ್ತವ್ಯ ಲೋಪ ಹಿನ್ನಲೆಯಲ್ಲಿ ಶಿಕ್ಷಕರೊಬ್ಬರನ್ನು ಡಿಡಿಪಿಐ ರೊಬ್ಬರು ಅಮಾನತು ಮಾಡಿ ಆದೇಶ ಮಾಡಿದ ಘಟನೆ ಕುಶಾಲನಗರ ದಲ್ಲಿ ನಡೆದಿದೆ. ಕರ್ತವ್ಯನಿರತ ಪೊಲೀಸ್ ಪೇದೆಯ ಮೇಲೆ ಹಲ್ಲೆ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನ ಕ್ಕೊಳಗಾಗಿರುವ ಸಹ ಶಿಕ್ಷಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕೊಡಗು ಜಿಲ್ಲೆಯ ಬೇತುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರಾದ ನಾಗೇಂದ್ರ ಕೆ.ಜಿ.ಅಮಾನತುಗೊಂಡಿರುವ ಶಿಕ್ಷಕರಾಗಿದ್ದು ನವಂಬರ್ 29ರಂದು ಕುಶಾಲನಗರ ಗ್ರಾಮಾಂ ತರ ಪೊಲೀಸ್ ಠಾಣೆಯ ವಾಹನ ಚಾಲಕ ಯೋಗೇಶ್ ಎಸ್.ಎನ್ ಅವರಿಗೆ ದೈಹಿಕ ಹಲ್ಲೆ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಲ್ಲಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ನಾಗೇಂದ್ರ ವಿರುದ್ದ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 17ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ ಹಿನ್ನೆಲೆಯಲ್ಲಿ ಆರೋಪಿ ಸ್ಥಾನದಲ್ಲಿರುವ ಶಿಕ್ಷಕ ನಾಗೇಂದ್ರ ನ್ಯಾಯಾಂಗ ಬಂಧನದ ಹಿನ್ನಲೆಯಲ್ಲಿ ಸಧ್ಯ ಅವರನ್ನು ಸೇವೆ ಯಿಂದ ಅಮಾನತ್ತುಗೊಳಿಸಲಾಗಿದೆ.ಶಿಸ್ತು ಪ್ರಾಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ.ರಂಗಧಾ ಮಯ್ಯ ಅವರು ಅಮಾತು ಮಾಡಿ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಕುಶಾಲನಗರ…..