ಧಾರವಾಡ –
ರೈತರ ಹಲವಾರು ಸಮಸ್ಯೆಗಳನ್ನು ಮುಂದಿಟ್ಟು ಕೊಂಡು ರಾಜ್ಯ ಸರ್ಕಾರದ ವಿರುದ್ಧ ಧಾರವಾಡ ಗ್ರಾಮೀಣ ಭಾಗದ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೂ ಪಾದಯಾತ್ರೆ ಆರಂಭಿಸಿದ್ದಾರೆ.
ಉಪ್ಪಿನ ಬೆಟಗೇರಿ ಗ್ರಾಮದ ವಿರುಪಾಕ್ಷೇಶ್ವರ ದೇವಸ್ಥಾನದಿಂದ ಈ ಪಾದಯಾತ್ರೆ ಆರಂಭವಾ ಗಿದ್ದು ಪುಡಕಲಕಟ್ಟಿ,ಕರಡಿಗುಡ್ಡ, ತಿಮ್ಮಾಪುರ, ಮರೇವಾಡ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಸ್ವತಃ ಈ ಪಾದಯಾತ್ರೆ ಯಲ್ಲಿ ಪಾಲ್ಗೊಂಡಿದ್ದಾರೆ.ಬಿದ್ದ ಮನೆಗಳಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವುದು ರೈತರ ಹೊಲಗಳಿಗೆ ರಸ್ತೆ ನಿರ್ಮಾಣ, ಬೆಳೆ ವಿಮೆ, ಬೆಳೆ ಪರಿಹಾರ ನೀಡುವುದು ಸೇರಿದಂತೆ ರೈತರ ಅನೇಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಈ ಪಾದಯಾತ್ರೆ ನಡೆಸಲಾಗುತ್ತಿದೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..