ಬಳ್ಳಾರಿ –
ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಪಕ್ಷವನ್ನು ಘೋಷಣೆ ಮಾಡಿದ ಬೆನ್ನಲ್ಲೇ ಇತ್ತ ಬಿಜೆಪಿ ಪಕ್ಷದ ಮೊದಲ ವಿಕೆಟ್ ಪತನವಾಗಿದೆ.ಹೌದು ಅತ್ತ ರಾಜ್ಯದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿ ಸುವ ಮೂಲಕ ಡಿ.25 ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್ ಕೊಟ್ಟಿದ್ದಾರೆ.
ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಪಕ್ಷಕ್ಕೆ ಶಾಕ್ ನೀಡಿದ್ದಾರೆ ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿ ಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥನವಾಗಿದೆ.
ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು ಶೇಖರ್ ರಾಜೀನಾಮೆ ನೀಡಿದ್ದಾರೆ. ಬುಡಾ ಮಾಜಿ ಅಧ್ಯಕ್ಷ ಕೂಡಾ ಆಗಿದ್ದರು.ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಜನಾರ್ದನ ರೆಡ್ಡಿ ಪಾತ್ರ ಪ್ರಮುಖ ವಾಗಿತ್ತು.ಆದರೆ ಇತ್ತೀಚಿಗೆ ಜನಾರ್ದನ ರೆಡ್ಡಿ ಅವರನ್ನ ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದೇ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿವೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿ ಬಳ್ಳಾರಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದು ಮುಂದೇನು ಇನ್ನೂ ಯಾವ ಯಾವ ಬೆಳವಣಿಗೆ ಆಗುತ್ತವೆ ಎಂಬೊಂದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬಳ್ಳಾರಿ…..